ಆರ್‌ಸಿಬಿ ಟೀಂ ವಿಜಯೋತ್ಸವದ ವೇಳೆ ದೊಡ್ಡ ದುರಂತವೇ ನಡೆದು ಹೋಗಿದೆ.. ಸಂಭ್ರಮಾಚರಣೆಗೆ ಬಂದಿದ್ದ ಆರ್‌ಸಿಬಿ ಅಭಿಮಾನಿಗಳ ಮಧ್ಯೆ ನೂಕು ನುಗ್ಗಲು ಉಂಟಾಗಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.. ಅಹ್ಮದಾಬಾದ್‌ನಲ್ಲಿ ಪಂಜಾಬ್‌ ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಗೆದ್ದು ಚಾಂಪಿಯನ್‌ ಆದ ಬಳಿಕ ನಿನ್ನೆಯಿಂದಲೇ ಆರ್‌ಸಿಬಿ ಅಭಿಮಾನಿಗಳು ಭರ್ಜರಿ ವಿಜಯೋತ್ಸವ ಆಚರಿಸುತ್ತಿದ್ದಾರೆ.

ಇದ್ರ ಮಧ್ಯೆ ಕಪ್‌ ಜೊತೆಗೆ ಬೆಂಗಳೂರಿಗೆ ಬಂದಿರುವ ಆರ್‌ಸಿಬಿ ಟೀಂಗೆ, ವಿಧಾನಸೌಧದಲ್ಲಿ ಮುಂಭಾಗದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯುತ್ತಿದೆ.. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸಚಿವರು ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮಾಡ್ತಿದ್ದಾರೆ. ಮತ್ತೊಂದೆಡೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಗ್ರ್ಯಾಂಡ್‌ ಸೆಲೆಬ್ರೇಷನ್‌ ಇದ್ದು, ಅಭಿಮಾನಿಗಳ ಸಾಗರವೇ ಹರಿದು ಬಂದಿದೆ..

ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ರಿಂದ ನೂಕು ನುಗ್ಗಲು ಉಂಟಾಗಿದೆ.. ಈ ವೇಳೆ, ಮೂವರು ಸ್ಥಳದಲ್ಲೇ ಜೀವ ಬಿಟ್ಟಿದ್ದು, ಇನ್ನುಳಿದವರು ಆಸ್ಪತ್ರೆಯಲ್ಲಿ ಕೊನೆಯುಸಿ ರೆಳೆದಿದ್ದಾರೆ. 30ಕ್ಕೂ ಹೆಚ್ಚು ಅಭಿಮಾನಿಗಳು ಅಸ್ವಸ್ಥಗೊಂಡಿದ್ದು, ಅದ್ರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಅಂತಾ ಹೇಳಲಾಗ್ತಿದೆ..

ಅಸ್ವಸ್ಥರಿಗೆ ಬೌರಿಂಗ್‌ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಅಭಿಮಾನಿಗಳನ್ನು ರಕ್ಷಿಸಲು ಪೊಲೀಸರು ಜೀವಪಣಕ್ಕಿಟ್ಟು ಹೋರಾಡುತ್ತಿದ್ದಾರೆ.. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ..

Share.
Leave A Reply