ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದ್ದರಿಂದ ನೂಕುನುಗ್ಗಲು ಉಂಟಾಗಿ ದೊಡ್ಡ ದುರಂತವೇ ಸಂಭವಿಸಿದೆ. 8 ವರ್ಷಗಳ ಕನಸು ಈಡೇರಿತು ಅಂತ ಖುಷಿ ಪಡೋ ಸಮಯದಲ್ಲೇ ಒಂದು ದುರಂತ ನಡೆದು ಹೋಗಿದೆ. ಚಿನ್ನಸ್ವಾಮಿ ಸ್ಟೇಡಿಯಂ  ಬಳಿ ಕಾಲ್ತುಳಿತ ಸಂಭವಿಸಿದೆ.

ಈ ದುರಂತದಲ್ಲಿ8 ಜನ ಆರ್‌ಸಿಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕಾಲ್ತುಳಿತದಿಂದ 20 ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ.. ಆರ್‌ಸಿಬಿ ಆಟಗಾರರನ್ನು ನೋಡೋ ಆಸೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಿಕ್ಕಿರಿದು ಸೇರಿದ್ದಾರೆ.. ಈ ವೇಳೆ ನಿಯಂತ್ರಣ ತಪ್ಪಿ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಕಾಲ್ತುಳಿತ ಸಂಭವಿಸಿ, ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಆರ್‌ಸಿಬಿ ಸಂಭ್ರಮಾಚರಣೆಗೆ ಬಂದ ವ್ಯಕ್ತಿ ಸಾವನ್ನಪ್ಪಿದ್ದು, ಸಂಭ್ರಮದಲ್ಲಿದ್ದ ಜನಕ್ಕೆ ಆಘಾತವಾಗಿದೆ..

Share.
Leave A Reply