RCB ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಸದ್ಯ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮಾಡುವ ಕಾರ್ಯಕ್ರಮದ ದಿನ ನಡೆದ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಸಹ ಆರ್ ಸಿಬಿ ಅಭಿಮಾನಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಜೂನ್‌.4 ರಂದು ನಡೆದ ಘಟನೆ ಕರ್ನಾಟಕದ ಪಾಲಿಗೆ ಕರಾಳ ದಿನವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ರು.

ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ರಾಜ್ಯಪಾಲರು ತಾವಾಗಿಯೇ ಬರಲಿಲ್ಲ, ಆಹ್ವಾನ ನೀಡಲಾಗಿತ್ತುʼ ಎಂದು ತಿಳಿಸಿದರು. ಜೂನ್ 4ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್‌ಸಿಬಿ ವತಿಯಿಂದ, ಆರ್‌ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. KSCA ಕಾರ್ಯದರ್ಶಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ರು ಎಂದು ಸ್ಪಷ್ಟಪಡಿಸಿದ್ದಾರೆ.

ನನಗೆ ಅಂದು ಬೆಳಿಗ್ಗೆ 11.29ಕ್ಕೆ ಕೆಎಸ್‌ಸಿಎ ವತಿಯಿಂದ ಶಂಕರ್ ಮತ್ತು ಜಯರಾಮ್ ಆಹ್ವಾನ ನೀಡಿ ಮನವಿ ಮಾಡಿಕೊಂಡರು. ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಕೆ.ಗೋವಿಂದರಾಜು ಮೂಲಕ ರಾಜ್ಯಪಾಲರನ್ನು ನಾನು ಕರೆದಿದ್ದೇನೆ. ನಾನು ಕೂಡ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ನೀವೂ ಬನ್ನಿ ಎಂದು ಕರೆದೆ ಎಂದು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ ಎಂದರು.

Share.
Leave A Reply