ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವುದು ಕಂಡುಬಂದಿದೆ. ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ ನಡೆದಿದೆ.

ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವುದು ಕಂಡುಬಂದಿದೆ.

ಹೌದು.. ಗುಜರಾತ್​ನ ಅಹಮದಾಬಾದ್​ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್​ ಏರ್​ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಹಾಗೂ ಹಲವು ಗಣ್ಯರು ಇದ್ದರೂ ಎಂದು ಹೇಳಲಾಗುತ್ತಿದೆ.

ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು ಎನ್ನಲಾಗಿದೆ.

ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Share.
Leave A Reply