ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುಮನಹಳ್ಳಿಯ ಡಾ.ಬಾಬು ಜಗಜೀವನರಾಮ್ ಭವನದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು.

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನೀಡಲಾಗುವ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಭಾರತೀಯ ವಿಜ್ಞಾನ ಸಂಸ್ಥೆಯ ಕೌಶಾಲ್ ವರ್ಮಾ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರಾದ ಹರಿ ಮರಾರ್, ಮೈಸೂರು ಸ್ಯಾಂಡಲ್ ಸೋಪ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಪಿ.ಕೆ.ಎಂ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇನ್ನು ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಶಿವರಾಜ್ ತಂಗಡಗಿ, ಕೆ.ಹೆಚ್ ಮುನಿಯಪ್ಪ, ಹೆಚ್.ಸಿ ಮಹದೇವಪ್ಪ ಭಾಗಿಯಾಗಿದ್ರು. ಅಲ್ಲದೆ ಸುತ್ತೂರು ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಗಳಾದ ಡಾ.ನಿರ್ಮಲಾನಂದ ಸ್ವಾಮೀಜಿ,

ಸ್ಫಟಿಕಪುರಿ ಮಹಾಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ಬಮುಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್, ಬಿಡಿಎ ಅಧ್ಯಕ್ಷರಾದ ಎನ್. ಎ ಹ್ಯಾರಿಸ್, ಶಾಸಕರಾದ ಬಾಲಕೃಷ್ಣ, ಎಸ್.ಟಿ ಸೋಮಶೇಖರ್, ಮುನಿರತ್ನ, ಶ್ರೀನಿವಾಸ್, ಎಂಎಲ್ ಸಿ ಪುಟ್ಟಣ್ಣ, ಒಕ್ಕಲಿಗರ ಸಂಘದ ಅಧ್ಯಕ್ಷರಾದ ಕೆಂಚಪ್ಪಗೌಡ, ಗ್ರೇಟರ್ ಬೆಂಗಳೂರು (ಬಿಬಿಎಂಪಿ) ಮುಖ್ಯ ಆಯುಕ್ತ ಮಹೇಶ್ವರ ರಾವ್, ಬಿಡಿಎ ಆಯುಕ್ತ ಮನಿವಣ್ಣನ್ ಮತ್ತಿತರರು ಉಪಸ್ಥಿತರಿದ್ದರು.

Share.
Leave A Reply