ಗುಜರಾತ್ನಲ್ಲಿ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ದುರಂತ ಅಂತ್ಯ ಕಂಡಿತ್ತು. ಸದ್ಯ ಇದೀಗ ಇದರ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ನಿನ್ನೆ ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ. ದುರಂತ ನಡೆದ ಸ್ಥಳದಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದ್ದು ಡಿಜಿಸಿಎ ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವೈದ್ಯಕೀಯ ಕಾಲೇಜು ಹಾಸ್ಟೆಲ್ನ ಕಟ್ಟಡದ ಮೇಲೆ ಈ ಬ್ಲಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಅಹಮದಾಬಾದ್‌ನ ಬಳಿಯ ಏರ್ ಇಂಡಿಯಾ ವಿಮಾನ ದುರಂತಕ್ಕೆ ಕಾರಣ ಏನು ಎಂದು ತಿಳಿದುಕೊಳ್ಳ ಬ್ಲ್ಯಾಕ್‌ಬಾಕ್ಸ್ ಹೆಚ್ಚು ಸಹಕಾರಿ ಆಗಲಿದೆ. ಪತ್ತೆಯಾದ ಬ್ಲ್ಯಾಕ್‌ಬಾಕ್ಸ್‌ನಿಂದ ವಿಮಾನದ ಕೊನೆಯ ಕ್ಷಣಗಳ ಮಾಹಿತಿ ಲಭ್ಯವಾಗಲಿವೆ. ಇದರಿಂದ ತನಿಖೆಗೆ ಹೆಚ್ಚು ಉಪಯುಕ್ತವಾಗಲಿದೆ. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಹಾಗೂ ವಿಮಾನ ಡೇಟಾ ರೆಕಾರ್ಡರ್‌ನಿಂದ ಈ ದುರಂತಕ್ಕೆ ಕಾರಣ ಹುಡುಕಲಾಗುತ್ತದೆ.
ಮೂಲಗಳ ಪ್ರಕಾರ, ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ)ದ ತಂಡ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಜನದಟ್ಟಣೆಯ ಮೇಘನಿನಗರ ಪ್ರದೇಶದಲ್ಲಿ ಒಂದು ಬ್ಲ್ಯಾಕ್ ಬಾಕ್ಸ್ ವಶಪಡಿಸಿಕೊಂಡಿದೆ. ಇಲ್ಲಿಯೇ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನ ಪತನಗೊಂಡಿತ್ತು.