Site icon BosstvKannada

ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ಕಿಡಿ

ರಾಜ್ಯದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಏಟಿಗೆ ಎದುರೇಟು ಜೋರಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್‌ ಹಂತ ಹಂತವಾಗಿ ತಿರುವು ಪಡೆದುಕೊಳ್ಳಿದೆ..

ಈ ಕುರಿತು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಬಿ ಕಪ್‌ ಗೆದ್ದಿರೋ ಸಂಭ್ರಮಕ್ಕೆ ರಾಜ್ಯ ಸರ್ಕಾರ ಕ್ರೆಡಿಟ್‌ಗೋಸ್ಕರ ವಿಧಾನಸೌಧದ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು ಅಂತಾ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ..

ಇನ್ನು ಸಿಎಂ ಸಿದ್ದರಾಮಯ್ಯ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ವಿಧಾನಸೌಧದ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಅಂತಾ ಹೇಳಿದ್ದಾರೆ.

ಇನ್ನು ಸಿಎಂ ಅವರ ಹೇಳಿಕೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು, ಸನ್ಮಾನ್ಯ ಶ್ರೀ @siddaramaiah ನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!?
ದಯವಿಟ್ಟು ಹೇಳುವಿರಾ?

ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ?ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಪೋಸ್ಟ್‌ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

Exit mobile version