ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿ ಆಗಿ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದ್ದು, ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. . ಈ ಮೂಲಕ 15ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. 452 ಮಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.  

ಪ್ರತಿಸ್ಪರ್ಧಿಯಾಗಿದ್ದ ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು.

ಉಪರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 10 ಗಂಟೆ ಸಂಜೆ 5 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿ ಮೊದಲ ಚಲಾಯಿಸಿದ್ದರು. ಬಳಿಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಮಿತ್‌ ಶಾ ಸೇರಿದಂತೆ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಿದರು.

Share.
Leave A Reply