ಸಹನಟಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಜೈಲು ಸೇರಿದ್ದ ಮಡೆನೂರು ಮನುಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.. ತನ್ನ ಸಹ ಕಲಾವಿದೆ ಮೇಲೆ ಅತ್ಯಾಚಾರ ಎಸಗಿರುವ ಕೇಸ್‌ಗೆ ಸಂಬಂಧಿಸಿದಂತೆ ಮಡೆನೂರು ಮನು ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು.. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಡೆನೂರು ಮನುಗೆ ರಿಲೀಫ್ ಸಿಕ್ಕಿದ್ದು, ಮನುಗೆ ಜಾಮೀನು ಮಂಜೂರಾಗಿದೆ..
ಅತ್ಯಾಚಾರ ಆರೋಪದಡಿಯಲ್ಲಿ ಮನು ಬಂಧಿಸಿ, ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಆದ್ರೀಗ ನಿನ್ನೆ ನಡೆದ ಕೋರ್ಟ್ ವಿಚಾರಣೆಯಲ್ಲಿ ಮನುಗೆ ಬೆಲ್ ಮಂಜೂರಾಗಿದ್ದು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ..
ಇನ್ನ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ಠಾಣೆಯಲ್ಲಿ ನಟ ಮನು ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮಡೆನೂರು ಮನು ಅರೆಸ್ಟ್ ಮಾಡಿದ್ದರು. ಮನು ನಾಯಕನಾಗಿ ನಟಿಸಿದ್ದ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ಬಿಡುಗಡೆಯಾಗುವ ಒಂದು ದಿನ ಮೊದಲು ಪೊಲೀಸರು ಬಂಧಿಸಿದ್ರು..

