ಕಮಲ್ ಹಾಸನ್, ಕನ್ನಡ ಭಾಷೆಯ ಉಗಮದ ಬಗ್ಗೆ ಆಡಿರುವ ಮಾತಿಗೆ ಕರುನಾಡಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸದ್ಯ ವಿವಾದದ ಸ್ವರೂಪ ಪಡೆದುಕೊಂಡಿವೆ. ಕಮಲ್ ವಿರುದ್ಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಕಮಲ್ ನಟನೆಯ ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗದಂತೆ ತಡೆಯುವುದಾಗಿ ಘೋಷಿಸಿವೆ.
ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್ಗೆ ಪೊಲೀಸರ ಭದ್ರತೆ ಕೋರಿ ಕಮಲ್ ಹಾಸನ್ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ನ್ ಏಕಸದಸ್ಯ ಪೀಠದಲ್ಲಿ ನಡೆದಿದೆ. ಈ ವೇಳೆ ಕಮಲ್ ಹಾಸನ್ಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿ ಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ರಾಜಗೋಪಾಲಚಾರ್ಯ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸ್ತೇವೆ’ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ..

