Site icon BosstvKannada

ಯೋಗಿಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ CBI ವಶಕ್ಕೆ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್​​ ಕುಲಕರ್ಣಿ (Vinay Kulkarni) ಇಂದು ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು.

ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಕೋರ್ಟ್ ಸೂಚನೆಯ ಮೇರೆಗೆ CBI ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಮುಗಿದ ಬಳಿಕ ಜೈಲಿ ವಿನಯ್ ಕುಲಕರ್ಣಿ ಶಿಫ್ಟ್‌ ಮಾಡಲಿದ್ದಾರೆ.

ಯೋಗೀಶ್‌ ಗೌಡ ಕೊಲೆ ಪ್ರಕರಣವೇನು?
ಒಂಬತ್ತು ವರ್ಷಗಳ ಹಿಂದೆ ಅಂದರೆ 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಜಾಮೀನು ರದ್ದಾಗಿದೆ. 2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು.

ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಆರೋಪಿಸಿ, ಅವರನ್ನು 2020 ನವೆಂಬರ್ 5 ರಂದು ಸಿಬಿಐ ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು. 2016ರ ಮೇ ತಿಂಗಳಲ್ಲಿ ಯೋಗಿಶ್ ಗೌಡ ಅವರ ಕೊಲೆಯಾಗಿತ್ತು.

ಜನಪ್ರತಿನಿಧಿ ನ್ಯಾಯಾಲಯ ಆದೇಶ
ಯೋಗಿಶ್ ಗೌಡ ಕೊಲೆ ಪ್ರಕರಣದ 15ನೇ ಆರೋಪಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇತ್ತೀಚೆಗಷ್ಟೇ ತಿರಸ್ಕರಿಸಿತ್ತು. ವಿಚಾರಣಾ ನ್ಯಾಯಾಲಯಕ್ಕೆ ಇದೇ 13ರೊಳಗೆ ಶರಣಾಗುವಂತೆ ಆದೇಶಿಸಿತ್ತು. ವಿನಯ್‌ ಕುಲಕರ್ಣಿ ಅವರಿಗೆ 2021ರ ಆಗಸ್ಟ್ 11ರಂದು ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು.

ಕುಲಕರ್ಣಿ ಹಾಗೂ ಇನ್ನೋರ್ವ ಆರೋಪಿಯು ಪ್ರಕರಣದ ಸಾಕ್ಷಿಗಳಿಗೆ 1 ಲಕ್ಷ ರೂ.ವರೆಗೆ ಹಣದ ಅಮಿಷವೊಡ್ಡುತ್ತಿದ್ದಾರೆ. ಇದು ಷರತ್ತುಗಳ ಉಲ್ಲಂಘನೆಯಾಗಿದ್ದು, ಅವರ ಜಾಮೀನನ್ನು ರದ್ದುಪಡಿಸಬೇಕೆಂದು ಕೋರಿ ಸಿಬಿಐ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಿಬಿಐ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿತ್ತು.

Exit mobile version