ರಾಜ್ಯದಲ್ಲಿ ಮುಂಗಾರು ಪೂರ್ವವೇ ಮಳೆಯಬ್ಬರ ಜೋರಾಗಿತ್ತು.. ಹೀಗಿರುವಾಗ ಈಗ ಮುಂಗಾರು ಮಳೆ ಆರಂಭವಾಗಿದೆ. ಹವಮಾನ ಇಲಾಖೆಯೂ ರಾಜ್ಯದಲ್ಲಿ ಮುಂದಿನ 4ದಿನ ಭಾರೀ ಮಳೆಯಾಗಲಿದೆ ಅಂತಾ ವರದಿಯೂ ಪ್ರಕಟಿಸಿತ್ತು. ರಾಜ್ಯಾದ್ಯಂತ ಇಂದಿನಿಂದ ಜೂನ್‌ 17 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅದರಂತೆ ಕರಾವಳಿ ಸೇರಿದಂತೆ ಮಲೆನಾಡಿನಲ್ಲಿ ಸದ್ಯ ಬಿಟ್ಟು ಬಿಡದೆ ಸುರಿಯುತ್ತಿದೆ. ಭಾರೀ ಮಳೆಗೆ ಜನರು ಹೈರಾಣಾಗಿದ್ದಾರೆ. ಅನೇಕ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಇನ್ನು ನಾಲ್ಕು ದಿನ ವರುಣ ಭೋರ್ಗರೆಯಲಿದ್ದಾನೆ ಎಂಬ ಮುನ್ಸೂಚನೆಯೂ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣಾರ್ಭಟ ಜೋರಾಗಿದ್ದು, ಗುರುವಾರ ಅಂಗನವಾಡಿ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಅಲರ್ಟ್ ನೀಡಿದೆ.

Share.
Leave A Reply