ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆಯಾಗದೆ ಕೊಂಚ ಬ್ರೇಕ್ ಸಿಕ್ಕಿತ್ತು. ಇದೀಗ ಮತ್ತೆ ವರುಣನ ಅಬ್ಬರ ಹೆಚ್ಚಾಗಲಿದ್ದು, ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ರಾಜ್ಯ 11 ಜಿಲ್ಲೆಗಳಲ್ಲಿ ಜೂನ್.12ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆ ಮೂರು ದಿನಗಳ ಕಾಲ ಕೆಲವು ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಉಡುಪಿ, ಹಾಸನ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ 115 ಮಿ.ಮೀ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು ಮತ್ತು ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇರಲಿದೆ.
ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ಜೂನ್ 12 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಜೂನ್ 13 ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಮಲೆನಾಡು, ಕರಾವಳಿ ಸೇರಿದಂತೆ ಇತರೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.
10 ಜಿಲ್ಲೆಗಳಿಗೆ ರೆಡ್ ಅಲರ್ಟ್
ಜೂನ್ 13 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿಗೂ ಅತ್ಯಂತ ಭಾರೀ ಮಳೆ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಕೊಡಲಾಗಿದೆ 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಅವಧಿಗೂ ಮುನ್ನ ಮುಂಗಾರು ಮಳೆ ಆರಂಭವಾಯಿತು. ಮೇ ತಿಂಗಳಲ್ಲಿ ಭಾರಿ ಮಳೆಯಾಗಿತ್ತು. ಆದರೆ, ಮುಂಗಾರು ಆರಂಭದ ದಿನವಾದ ಜೂನ್ ಮೊದಲ ವಾರದಲ್ಲೇ ಕೊಂಚ ಬಿಡುವು ಕೊಟ್ಟಿತ್ತು. ಈಗ ಮಳೆರಾಯ ಮತ್ತೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ.
