Site icon BosstvKannada

ವಿಮಾನ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ!

ಅಹಮದಾಬಾದ್‌ನಲ್ಲಿ (Ahmedabad) ಏರ್ ಇಂಡಿಯಾ (Air India) ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಎಲ್ಲರಿಗೂ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅಲ್ಲದೇ ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನೂ ಅವಘಡದ ಕುರಿತು ಅವರು, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದು, ವಿಮಾನ ಅಪಘಾತದ ಕುರಿತು ಮಾಹಿತಿ ಪಡೆದಿದ್ದಾರೆ.

Exit mobile version