232 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಬೆಂಕಿಯ ಉಂಡೆಯಾಗಿ ಪತನಗೊಂಡಿದೆ. ಗುಜರಾತ್​ನ ಅಹ್ಮದಾಬಾದ್​ನಲ್ಲಿ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ. ಅಹ್ಮದಾಬಾದ್​ ಏರ್​ಪೋರ್ಟ್​ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದು ನಿಮಿಷದಲ್ಲಿ ಪತನಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದಾರೆ. ಗುಜರಾತ್ ಸಿಎಂ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಡಿಜಿಪಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದಿದ್ದಾರೆ.. ಸದ್ಯ ಅಮಿತ್ ಶಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ತಿದ್ದಾರೆ.

Share.
Leave A Reply