Site icon BosstvKannada

ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಸರೋಜಾದೇವಿ ಅಂತ್ಯಸಂಸ್ಕಾರ

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ಅವರನ್ನು ಒಕ್ಕಲಿಗ ಸಂಪ್ರದಾಯದಂತೆ ಚನ್ನಪಟ್ಟಣ ತಾಲ್ಲೂಕಿನ ದಶಾವರ ಬಳಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದ ಬಿ.ಸರೋಜಾ ದೇವಿ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. 200ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಅವರು, 2019ರಲ್ಲಿ ಬಿಡುಗಡೆಗೊಂಡ ಪುನೀತ್ ರಾಜ್‌ಕುಮಾರ್ ನಟನೆಯ ನಟ ‘ಸಾರ್ವಭೌಮ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ವಿದಾಯ ಹೇಳಿದ್ದರು.

Exit mobile version