ಖ್ಯಾತ ಗಾಯಕಿ ಮಂಗ್ಲಿ (Mangli ) ಮೇಲೆ ಈಗ ಅತಿದೊಡ್ಡ ಆರೋಪ ಕೇಳಿ ಬಂದಿದೆ.. ಪಾರ್ಟಿಯೊಂದರಲ್ಲಿ ಡ್ರಗ್ಸ್ ನಶೆಯಲ್ಲಿ ತೇಲಾಡಿದ್ರಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ, ಮಂಗ್ಲಿ ಬರ್ತ್ಡೇ ದಿನ ನಡೆದ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಪೊಲೀಸರು ಮದ್ಯ ಮತ್ತು ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ ಅನ್ನೋ ಶಾಕಿಂಗ್ ಮಾಹಿತಿ ಹೊರಬಿದ್ದಿದೆ.. ಇದೀಗ ಸಿಂಗರ್ ಮಂಗ್ಲಿ ತಮ್ಮ ಮೌನವನ್ನು ಮುರಿದಿದ್ದಾರೆ. ಅವರು ಡ್ರಗ್ಸ್ ಬಳಕೆ ಮಾಡಿದ್ದನ್ನು ನಿರಾಕರಿಸಿದ್ದಾರೆ ಮತ್ತು ಪಾರ್ಟಿಗೆ ಅಗತ್ಯ ಪರವಾನಗಿ ಪಡೆಯದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ..

ಜೂನ್ 10ರಂದು ಮಂಗ್ಲಿ ಬರ್ತ್ಡೇ. ಈ ಕಾರಣಕ್ಕೆ ಅಂದು ರಾತ್ರಿ ಫಾರ್ಮ್ಹೌಸ್ನಲ್ಲಿ ಅವರು ಅದ್ದೂರಿ ಪಾರ್ಟಿ ಆಯೋಜನೆ ಮಾಡಿದ್ದರು. ಈ ವೇಳೆ ಅವರ ಆಪ್ತರು, ಗೆಳೆಯರು, ಕುಟುಂಬ ಸದಸ್ಯರು ಹಾಗೂ ತಂಡದ ಸದಸ್ಯರು ಇದ್ದರು. ಈ ವೇಳೆ ಮದ್ಯ ಬಳಕೆ ಆಗಿದೆ.
ಇಷ್ಟು ದೊಡ್ಡ ಪಾರ್ಟಿ ಮಾಡುವಾಗ ಮತ್ತು ಮದ್ಯ ಕೊಡಲು ಒಪ್ಪಿಗೆ ಪಡೆಯಬೇಕು ಎಂಬ ನಿಯಮ ಇದೆ. ಆದರೆ, ಇದನ್ನು ತೆಗೆದುಕೊಂಡಿಲ್ಲ ಅಂತಾ ಹೇಳಲಾಗ್ತಿದೆ.. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಂಗರ್ ಮಂಗ್ಲಿ, ಆಲ್ಕೋಹಾಲ್ ನೀಡುವ ವಿಚಾರದಲ್ಲಿ ಒಪ್ಪಿಗೆ ಪಡೆಯಬೇಕು ಎನ್ನುವ ವಿಷಯ ನನಗೆ ನಿಜವಾಗಿಯೂ ತಿಳಿದಿರಲಿಲ್ಲ.
ನಾನು ಹಾಗೆ ಮಾಡಲಿಲ್ಲ ಎಂಬ ಕೊರಗು ಇದೆ. ಯಾರಾದರೂ ನನಗೆ ಮಾರ್ಗದರ್ಶನ ನೀಡಿದ್ದರೆ, ನಾನು ಹಾಗೆ ಮಾಡುತ್ತಿದ್ದೆ. ಪಾರ್ಟಿಯಲ್ಲಿ ಯಾವುದೇ ವಿದೇಶಿ ಮದ್ಯ ಇರಲಿಲ್ಲ. ಲಭ್ಯವಿದ್ದದ್ದು ಸ್ಥಳೀಯ ಮದ್ಯ ಮಾತ್ರ. ಪೊಲೀಸರು ಸಹ ಇದನ್ನೇ ದೃಢಪಡಿಸಿದ್ದಾರೆ. ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ ಅಂತಾ ಪೋಲಿಸರು ಕೂಡ ಹೇಳಿದ್ದಾರೆ ಎಂದು ಮಂಗ್ಲಿ ತಿಳಿಸಿದ್ದಾರೆ.