ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಯಾವುದೇ ಕುತಂತ್ರಗಳಿಗೆ ರಾಜ್ಯ ಬಿಜೆಪಿ ನಾಯಕರು ಕಾರ್ಯಕರ್ತರು ಹೆದರಲ್ಲ, ಬಗ್ಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮು ಗಲಭೆಗಳನ್ನು ಹತ್ತಿಕ್ಕಲು ಮತ್ತು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವುಂಟಾಗದಿರಲಿ ಅಂತ ಹೇಳಿ ರಾಜ್ಯ ಸರ್ಕಾರ ರಚಿಸಿರುವ ಕೋಮು ನಿಗ್ರಹ ದಳ ಕೇವಲ ಹಿಂದೂ ಮತ್ತು ಬಿಜೆಪಿ ಕಾರ್ಯಕರ್ತನ್ನು ಟಾರ್ಗೆಟ್ ಮಾಡಲು ಸರ್ಕಾರ ಸ್ಥಾಪಿಸಿರುವ ಒಂದು ಟೂಲ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.
ಇನ್ನು, ಸಿದ್ದು ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಸಿದ್ದರಾಮಯ್ಯ ಸರ್ಕಾರದ ಯಾವುದೇ ಕುತಂತ್ರಗಳಿಗೆ ರಾಜ್ಯ ಬಿಜೆಪಿ ನಾಯಕರು ಕಾರ್ಯಕರ್ತರು ಹೆದರಲ್ಲ, ಬಗ್ಗಲ್ಲ ಎಂದು ವಾಗ್ದಾಳಿ ನಡೆಸಿದ್ರು.

