ಹೇಮಾವತಿ ಎಕ್ಸ್‌ಪ್ರೆಸ್ ಕಾಲುವೆ ಕಾಮಗಾರಿ ಮುಂದುವರಿಸಬೇಕೋ, ಬೇಡವೋ ಎಂಬುದರ ಕುರಿತು ತೀವ್ರ ಚರ್ಚೆಗಳು ಆಗುತ್ತಿವೆ. ಈ ಮಧ್ಯೆ ಇಂದು ಕಾಮಗಾರಿ ವಿರೋಧಿ ಪ್ರತಿಭಟನೆ ನಡೆದಿದೆ. ಇತ್ತೀಚೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕಾಮಗಾರಿ ಆರಂಭಿಸದಂತೆ ಆಗ್ರಹಿಸಿದ್ದಾರೆ. ಇದೀಗ ಇದೆಲ್ಲವು ರಾಜಕೀಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ತಾಂತ್ರಿಕ ಸಮಿತಿಯು ನೀಡಿದ ವರದಿಯನ್ನು ಆಧರಿಸಿ ತುಮಕೂರಿನಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿಯನ್ನು ಆರಂಭಿಸಲಾಗಿದೆ. ಹೀಗಿದ್ದರೂ ಅದು ನಿಲ್ಲಿಸಬೇಕು ಎಂದು ಬಿಜೆಪಿ ವಿರೋಧಿಸುತ್ತಿದೆ.

ತುಮಕೂರಲ್ಲಿ ಎಕ್ಸ್ ಪ್ರೆಸ್ ಕೆನಾಲ್ ಮಾಡಬೇಕು ಎಂದು ತೀರ್ಮಾನ ತೆಗೆದುಕೊಂಡು, 1500 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಯಿತು. ಕಾಮಗಾರಿ ಆರಂಭಕ್ಕೆ ತಾಂತ್ರಿಕ ವರದಿ ನೀಡಿದೆ ಕೆಲಸ ಶುರು ವಾಗುತ್ತಿದ್ದಂತೆ ಬಿಜೆಪಿಯವರು ವಿರೋಧ ಮಾಡಿದರು. ಉಪ ಮುಖ್ಯಮಂತ್ರಿಯವರು ಬಾರಿ ಸಭೆ ನಡೆಸಿದರು. ಸಂಸದರು, ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

ಟೆಕ್ನಿಕಲ್ ಕಮಿಟಿ ರಚಿಸಬೇಕು ಎಂದು ಒತ್ತಾಯಿಸಿದ್ದರು. ಕಾಮಗಾರಿ ಮಾಡಬಹುದು ಎಂದು ಟೆಕ್ನಿಕಲ್ ಕಮಿಟಿ ವರದಿ ನೀಡಿದೆ. ಅದರಂತೆ ಕೆಲಸ ಶುರುವಾಯಿತು. ವರದಿಯಲ್ಲಿ ಲಿಂಕ್‌ಕೆನಲ್‌‌ನಿಂದ ತೊಂದರೆ ಆಗುತ್ತದೆ ಎಂದು ಬಂದಿದ್ದರೆ ಮಾಡುತ್ತಿರಲಿಲ್ಲ. ಈಗ ಬಿಜೆಪಿಯವರು ರಾಜಕೀಯ ದುರುದ್ದೇಶದಿಂದ ವಿರೋಧ ಮಾಡುತ್ತಿದ್ದಾರೆ ಎಂದು ಹೇಳಿದರು.

Share.
Leave A Reply