ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯ್ಯಾಮೂರ್ತಿಗಳಾಗಿ ಪೆರುಗು ಶ್ರೀ ಸುಧಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಹೈಕೋರ್ಟ್ ನ್ಯಾಯಾಮೂರ್ತಿ ಶ್ರೀಮತಿ ಪೆರುಗು ಶ್ರೀ ಸುಧಾ ಅವರಿಗೆ ಪ್ರಮಾಣ ವಚನವನ್ನ ಬೋಧಿಸಿದರು. ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ನ್ಯಾಯಮೂರ್ತಿ ಪೆರುಗು ಶ್ರೀ ಸುಧಾ ಪ್ರಮಾಣ ವಚನ ಸ್ವೀಕರ ಮಾಡಿದ್ರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಉಚ್ಛ ನ್ಯಾಯಾಲಯದ ಹಂಗಾಮಿ ನ್ಯಾಯಾಧೀಶರಾದ ವಿ.ಕಾಮೇಶ್ವರ್ ರಾವ್, ಹಾಗೂ ಇಂಧನ ಇಲಾಖೆಯ ಸಚಿವರಾದ ಕೆ.ಜೆ.ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಹಾಗೂ ಅನೇಕ ಗಣ್ಯರು ಭಾಗಿಯಾಗಿದ್ರು. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಸತ್ಯವತಿ ಜಿ, ಕರ್ನಾಟಕ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು, ವಕೀಲರು ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ ಹೈಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸರಳ ರೀತಿಯಲ್ಲಿ ಜರುಗಿತು.
ಈ ಕಾರ್ಯಕ್ರಮದ ಪೋಟೋಗಳು ಇಲ್ಲಿವೆ..

ಸಿಎಂ ಸಿದ್ದರಾಮಯ್ಯ ಅವರು ಗೌರವಾನ್ವಿತ ನ್ಯಾಯಮೂರ್ತಿ ಪೆರುಗು ಶ್ರೀ ಸುಧಾ ಅವರಿಗೆ ಅಭಿನಂದನೆಗಳನ್ನ ತಿಳಿಸಿದ್ರು.