ಇತಿಹಾಸದಲ್ಲೇ ಮೊದಲ ಬಾರಿಗೆ ಕೆಆರ್‌ಎಸ್ ಜಲಾಶಯ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ. ಜೂನ್‌ನಲ್ಲಿ ಬಾಗಿನ ಅರ್ಪಿಸುವ ಅವಕಾಶ ಪಡೆದ ಮೊದಲ ಸಿಎಂ ಸಿದ್ದರಾಮಯ್ಯ ಎಂಬ ಹೆಗ್ಗಳಿಕೆ ತನ್ನದಾಗಿಸಿಕೊಳ್ಳಲಿದ್ದಾರೆ.

ಬಾಗಿನ ಅರ್ಪಿಸುವ ಸಂಬಂಧ ಬೆಳಗ್ಗೆ ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಪೂಜೆ ನಡೆಯಲಿದೆ. ಮೊರದಲ್ಲಿ ನವ ಧಾನ್ಯ, ಅರಿಶಿಣ ಕುಂಕುಮ, ಸೀರೆ, ಬಳೆ ತುಂಬಿಸಿ 40 ಜೊತೆ ಬಾಗಿನ ಸಿದ್ಧಪಡಿಸಲಾಗಿದೆ.

Share.
Leave A Reply