ರಾಜ್ಯದಲ್ಲಿ ಮುಂಗಾರು ಮಳೆಯಾರ್ಭಟ ಭಾರೀ ಬಿರುಸಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗ್ತಿದ್ದು, ಸಾಕಷ್ಟು ಅವಾಂತರಗಳಾಗಿವೆ. ಭಾರೀ ಮಳೆಗೆ ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು, ಮಳೆಗೆ ಧಾರವಾಡದಲ್ಲಿ ಬಹಳಷ್ಟು ಪ್ರದೇಶಗಳು ಹಾನಿಯಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ವೀಕ್ಷಿಸಿದರು. ಬಾಧಿತ ಪ್ರದೇಶಗಳ ವೀಕ್ಷಣೆಗೆ ಸರ್ಕಾರಿ ಕಾರಿನಲ್ಲಿ ತೆರಳದೆ, ವಾರ್ತಾ ಇಲಾಖೆಯಿಂದ ಆಯೋಜನೆಯಾಗಿದ್ದ ಪತ್ರಕರ್ತರ ವಾಹನದಲ್ಲೇ ತೆರಳಿದ ಸಚಿವರು, ಪತ್ರಕರ್ತರೊಂದಿಗೆ ಮಾಹಿತಿ ವಿನಿಮಯ ಮಾಡಿಕೊಂಡರು.

ಜೂನ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು, ವಿವಿಧೆಡೆ ಮಳೆಯಿಂದ ತೊಂದರೆಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಲಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ: ಧಾರವಾಡ ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆಯಾಗುತ್ತಿದ್ದು, ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜೂ.13 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Share.
Leave A Reply