ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಲೆಕ್ಷನ್ ಕಮಿಷನ್ ವಿರುದ್ಧ ಅತಿದೊಡ್ಡ ಬಾಂಬ್ ಸಿಡಿಸಿದ್ದಾರೆ.. ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ರಾಜ್ಯಗಳ ಕೆಲ ಕ್ಷೇತ್ರಗಳಲ್ಲಿ ನಕಲಿ ಮತದಾನ ಹಾಗೂ ಮತಗಳ್ಳತನ ನಡೆದಿದೆ ಅಂತಾ ದಾಖಲೆ ರಿಲೀಸ್ ಮಾಡಿದ್ದಾರೆ.. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ರಾಹುಲ್ ಗಾಂಧಿ, ಎಲ್ಲೆಲ್ಲಿ ವೋಟ್ ಚೋರಿ ನಡೆದಿದೆ ಅನ್ನೋದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ..
ನಕಲಿ ಮತ ಚಲಾವಣೆ
ಲೋಕಸಭಾ ಚುನಾವಣೆಯಲ್ಲಿ ಕೆಲ ರಾಜ್ಯಗಳಲ್ಲಿ ಮತ ಕಳ್ಳಾಟ ನಡೆದಿದೆ ಅಂತಾ ರಾಹುಲ್ ಗಾಂಧಿ ಆರೋಪಿಸಿದ್ದರು. ಆದ್ರೆ, ಚುನಾವಣಾ ಆಯೋಗ ನಿರಾಕರಿಸಿತ್ತು. ಆದರೆ, ಕಾಂಗ್ರೆಸ್ನಿಂದ ಈ ಬಗ್ಗೆ ಸಂಪೂರ್ಣವಾಗಿ ಸಂಶೋಧನೆ ಮಾಡಿಸಲಾಗಿದ್ದು, ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1 ಲಕ್ಷದ 250 ನಕಲಿ ಮತ ಚಲಾವಣೆಯಾಗಿದೆ ಅಂತಾ ಆರೋಪಿಸಿದ್ದಾರೆ.
ಚುನಾವಣೆಯಲ್ಲಿ ಮತಚೋರಿ..!
ಲೋಕಸಭೆ ಚುನಾವಣೆಯಲ್ಲಿ ಮತ ಕದ್ದಿದ್ದು ಯಾರು? ಕರ್ನಾಟಕದ ಮತದಾರರ ಪಟ್ಟಿಗಳಲ್ಲಿ ವಂಚನೆ ನಡೆದಿದೆ ಅಂತಾ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಕರ್ನಾಟಕದಲ್ಲಿ 40 ಸಾವಿರದ 9 ನಕಲಿ ಮತದಾರರ ವಿಳಾಸಗಳಿವೆ ಅಂತಾ ಆರೋಪಿಸಿದ್ದಾರೆ. ಕಾಂಗ್ರೆಸ್ ನಡೆಸಿದ ವೋಟ್ ಚೋರಿ ತನಿಖೆಯಲ್ಲಿ ಮನೆ ಸಂಖ್ಯೆ 0 ಅಂತಾ ಉಲ್ಲೇಖಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ, ಚುನಾವಣಾ ಆಯೋಗವು ಮತಗಳನ್ನು ಕದಿಯಲು ಬಿಜೆಪಿಯೊಂದಿಗೆ ಕೈಜೋಡಿಸಿದೆ. ಮತದಾರರ ಪಟ್ಟಿಗಳಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ ಅಂತಾ ಕರ್ನಾಟಕ ಮತದಾರರ ಪಟ್ಟಿಯನ್ನು ತೋರಿಸುವ ಮೂಲಕ ಅವರು ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ.. ಅಲ್ಲದೇ, ಒಂದು ಪ್ರಕರಣದಲ್ಲಿ 46 ಮತದಾರರು ಒಂದೇ ರೂಮಿನ ವಿಳಾಸದ ಅಡಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ.. ಆದರೆ ಆ ಸ್ಥಳಕ್ಕೆ ಭೇಟಿ ನೀಡಿದಾಗ, ಯಾರೂ ಅಲ್ಲಿ ವಾಸಿಸುತ್ತಿಲ್ಲ ಅಂತಾ ತಿಳಿದು ಬಂದಿದೆ ಅಂತಾ ಹೇಳಿದ್ದಾರೆ..
ನಕಲಿ ಫೋಟೋ, ನಕಲಿ ವಿಳಾಸ..!
ಇನ್ನೊಂದು ಶಾಕಿಂಗ್ ವಿಚಾರ ಅಂದ್ರೆ, ಗುರುಕಿರತ್ ಸಿಂಗ್ ಡ್ಯಾಂಗ್ ಅನ್ನೋ ವ್ಯಕ್ತಿಯ ಹೆಸರು ಮಹದೇವಪುರದ 4 ಬೂತ್ಗಳಲ್ಲಿ ವೋಟರ್ ಲಿಸ್ಟ್‌ನಲ್ಲಿದೆ. ಇಂತಹ ಸಾವಿರಾರು ಉದಾಹರಣೆ ಒಂದು ವಿಧಾನಸಭೆ ಕ್ಷೇತ್ರದಲ್ಲಿದೆ. ಆದಿತ್ಯ ಶ್ರೀ ವಾಸ್ತವ್ಯ ಕರ್ನಾಟಕ ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಮತದಾನದ ಹಕ್ಕು ಹೊಂದಿದ್ದಾನೆ. ಲಕ್ಷಾಂತರ ಜನರು ಹೀಗೆ ಬೇರೆ ಬೇರೆ ನಕಲಿ ವೋಟರ್ ಐಡಿ ಹೊಂದಿದ್ದಾರೆ ಅಂತಾ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಮತದಾನದ ದಾಖಲೆ ಬಿಡುಗಡೆ ಮಾಡಿದ್ದು, ಇದೀಗ ದೇಶದಲ್ಲಿ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ..
