Site icon BosstvKannada

ಕರ್ನಾಟಕದ ಆಳಂದದಲ್ಲಿ 6,018 ಮತ ಕಳ್ಳತನ : ರಾಹುಲ್‌ ಗಾಂಧಿ ಗಂಭೀರ ಆರೋಪ!

ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದ ರಾಹುಲ್‌ ಗಾಂಧಿ ಈಗ ಇನ್ನೊಂದು ಹೆಜ್ಜೆ ಮುಂದಿಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕಾಂಗ್ರೆಸ್‌ ಪ್ರಧಾನ ಕಚೇರಿ ಇಂದಿರಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಹುಲ್‌ ಗಾಂಧಿ, ಸಾಕ್ಷಿ ಸಮೇತ ಮತಗಳ್ಳತನ ಆರೋಪದ ಕುರಿತು ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಕರ್ನಾಟಕದ ಮತಗಳ್ಳತನದ ಬಗ್ಗೆಯೂ ಮಾತನಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ ಎಂದು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮತದಾರರ ಪಟ್ಟಿಯಿಂದ ಕೈಬಿಡಲಾದ ಮತದಾರರಾದ ಸೂರ್ಯಕಾಂತ್‌ನನ್ನ ವೇದಿಕೆ ಮೇಲೆ ಪರಿಚಯಿಸಿ ರಾಹುಲ್‌ ಗಾಂಧಿ ಅವರ ಕಡೆಯಿಂದಲೇ ಮಾತಾಡಿಸುವ ಮೂಲಕ ಹೊಸ ರೀತಿಯಲ್ಲಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಈ ಕುರಿತಾಗಿ ವೇದಿಕೆಯಲ್ಲಿ ಮಾತನಾಡಿದ ಆಳಂದದ ವ್ಯಕ್ತಿ, ನನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾದ ಸಂಗತಿ ನನಗೆ ತಡವಾಗಿ ಗೊತ್ತಾಯಿತು. ಈ ಕುರಿತು ದೂರು ದಾಖಲಿಸಿದ ಬಳಿಕವೂ, ಯಾವುದೇ ಕ್ರಮ ಕೈಗೊಳ್ಳಲಿಲ್ಲ ಅಂತಾ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ವಿರುದ್ಧ ಹರಿಹಾಯ್ದ ರಾಹುಲ್‌ ಗಾಂಧಿ, ಮುಖ್ಯ ಚುನಾವಣಾ ಆಯುಕ್ತರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಶಕ್ತಿಗಳ ಪರವಾಗಿ ಕೆಲಸ ಮಾಡುತಿದ್ದಾರೆ ಎಂದು ಆರೋಪ ಮಾಡುವುದರ ಮೂಲಕ ಬಿಜೆಪಿಗೆ ಟಾಂಗ್‌ ಕೊಟ್ಟರು.

Read Also : ಭಟ್ಕಳದಲ್ಲಿ ರಾಶಿ ರಾಶಿ ದನಗಳ ಅಸ್ಥಿಪಂಜರ : ಇಬ್ಬರು ಪೊಲೀಸರ ಬಲೆಗೆ!

Exit mobile version