ನಟ ಪ್ರಥಮ್‌ಗೆ ಜೀವ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ ವಿರುದ್ದ ಎಫ್‌ಐಆರ್‌ ದಾಖಲಾಗಿದೆ.

ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದ್ದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ದರ್ಶನ್ ಫ್ಯಾನ್ ಪೇಜ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ.
ಜುಲೈ 28 ರಿಂದ ಇಲ್ಲಿಯವರೆಗೂ ದರ್ಶನ್ ಅವರ ಅಧಿಕೃತ ಫ್ಯಾನ್ ಪೇಜ್‌ಗಳಾದ ಡಿ ಡೈನಾಸ್ಟಿ, ಡಿ ಕಿಂಗ್ ಡಮ್, ಡಿ ಯೂನಿವರ್ಸ್ ಮತ್ತು ಡೆವಿಲ್ ಕಿಂಗ್ ಡಮ್ ಜೊತೆಗೆ 500ಕ್ಕೂ ಹೆಚ್ಚು ಪೇಜ್‌ಗಳಿಂದ ನನ್ನ ವೈಯಕ್ತಿಕ ತೇಜೋವಧೆಗೆ ಇಳಿದಿರುತ್ತಾರೆ, ಆದ್ದರಿಂದ ಇವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ದೂರು ನೀಡಿದ್ದಾರೆ‌.

Share.
Leave A Reply