ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಶ್ರೀಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ರವರು ಭೈರವೈಕ್ಯರಾಗಿದ್ದಾರೆ.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿಗಳು ತಡರಾತ್ರಿ 12:01ಕ್ಕೆ ವಿಧಿವಶರಾಗಿದ್ದಾರೆ.. ಶ್ರೀಶ್ರೀಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ಕೆಂಗೇರಿಯಲ್ಲಿ ಶ್ರೀಮಠವನ್ನು ಸ್ಥಾಪನೆ ಮಾಡಿ ಧಾರ್ಮಿಕ, ಶಿಕ್ಷಣ, ಆಧ್ಯಾತ್ಮಿಕ, ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ರು.. ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಮಾಡಿದ್ರು.. ಸಾಮಾಜಿಕ ಕ್ಷೇತ್ರದಲ್ಲಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ರು. ಇದೀಗ ಅವರು ಭೈರವೈಕ್ಯರಾಗಿರೋದ್ರಿಂದ ಭಕ್ತಗಣ ತೀವ್ರ ದುಃಖಿತರಾಗಿದ್ದಾರೆ..
ಆಗಸ್ಟ್ 16, ಮಧ್ಯಾಹ್ನ 3ಗಂಟೆಯಿಂದ ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.. ಶ್ರೀಪೀಠದ ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಧಾರ್ಮಿಕ ಮುಖಂಡರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿಸಲಿದ್ದಾರೆ.. ಡಿಸಿಎಂ ಡಿ.ಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಅಶೋಕ್, ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಹಲವು ರಾಜಕೀಯ ಗಣ್ಯರು ಚಂದ್ರಶೇಖರನಾಥ ಸ್ವಾಮೀಜಿಗಳಿಗೆ ಸಂತಾಪ ಸೂಚಿಸಿದ್ದಾರೆ..
Read Also : ಶರಣಬಸಪ್ಪ ಅಪ್ಪ ಪಾರ್ಥಿವ ಶರೀರ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ.. ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ
