ದೇಶದಲ್ಲಿ ಆನ್​ಲೈನ್ ಮೂಲಕ ಮೋಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈಗ ಆ ವಂಚಕರ ಕಣ್ಣು ದೇವಸ್ಥಾನಗಳ ಮೇಲೂ ಬಿದ್ದದೆ. ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಹೀಗೆ ಅನೇಕ ಪ್ರಸಿದ್ಧ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ತೆರದು ಜನರಿಂದ ದುಡ್ಡನ್ನ ಪೀಕಿ ಪಂಗನಾಮ ಹಾಕಲಾಗುತ್ತಿತ್ತು. ಹೀಗೆ ನಕಲಿ ವೆಬ್‌ಸೈಟ್‌ ಮೂಲಕ ಕೋಟ್ಯಂತರ ರುಪಾಯಿ ವಂಚಿಸಿರುವ ಘಟನೆ ನಮ್ಮ ರಾಜ್ಯದಲ್ಲೇ ನಡೆದಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬವರನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು Www.Devaseva.com ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ತೆರೆದಿದ್ದು, ಅದರ ಮೂಲಕ ದೇಶದ ಮತ್ತು ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರು ಬಳಸಿ ವಿಶೇಷ ಪೂಜೆ, ಪ್ರಸಾದ, ಸೇವೆಗಳ ಹೆಸರಿನಲ್ಲಿ ಹಣ ಪಡೆದು ಭಕ್ತರನ್ನು ವಂಚಿಸುತ್ತಿದ್ದರು. ಈ ಕುರಿತಾಗಿ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ನಿರಂತರವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ದೇವಾಲಯದ ಉಪವ್ಯವಸ್ಥಾಪಕ ರಾಘವೇಂದ್ರ ಅವರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣವನ್ನ ಕೈಗೆತ್ತಿಕೊಂಡ ಪೋಲಿಸರು ವಿಶೇಷ ತಂಡ ರಚಿಸಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆನ್​ಲೈನ್ ಮೂಲಕ ಸೇವೆ ಪಡೆಯುವ ಭಕ್ತರು ಹಣ ಪಾವತಿಸುವ ಮೊದಲು ಅಧಿಕೃತ ವೆಬ್‌ಸೈಟ್‌ ಅಥವಾ ದೇವಸ್ಥಾನದ ಮಂಡಳಿಯನ್ನ ಸಂಪರ್ಕಿಸಿ ನಂತರ ಪಾವತಿಸಿ, ಯಾವುದೇ ಅನುಮಾನ ಬಂದಲ್ಲಿ ಸೈಬರ್ ಕ್ರೈಂ ಪೋರ್ಟ್‌ನಲ್ಲಿ ದೂರು ನೀಡುವಂತೆ ಸೂಚಿಸಿದ್ದಾರೆ.

Read Also : ಊಟಕ್ಕಿಂತ ಮುಂಚೆ ಇದನ್ನ ತಿಂದ್ರೆ 99% ಕಾಯಿಲೆಗಳು ದೂರ

Share.
Leave A Reply