ಇಷ್ಟು ದಿನ ತಣ್ಣಗಾಗಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಈಗ ಮತ್ತೆ ಭುಗಿಲೆದ್ದಿದೆ. ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಶಾಸಕರೊಬ್ಬರು ಪ್ರತ್ಯೇಕ ರಾಜ್ಯದ ಬೇಡಿಕೆ ಇಡುವ ಮೂಲಕ ಮತ್ತೊಮ್ಮೆ ಕಿಚ್ಚು ಹಚ್ಚಿದ್ದಾರೆ. ಹೌದು.. ಹಿರಿಯ ಕಾಂಗ್ರೆಸ್ ಮುಖಂಡ, ಶಾಸಕ ರಾಜು ಕಾಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ರಾಜು ಕಾಗೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ತಪ್ಪೇನು ಅಂತಾ ಹೇಳಿದ್ದಾರೆ. ಈ ಮೂಲಕ ಮತ್ತೆ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯ ಬೇಕು ಎನ್ನುವ ಕೂಗನ್ನು ಮುನ್ನೆಲೆಗೆ ತಂದಿದ್ದಾರೆ.
ವಾಯವ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಶಾಸಕ ರಾಜು ಕಾಗೆ, ಉತ್ತರ ಕರ್ನಾಟಕ ಭಾಗಕ್ಕೆ ಪ್ರತೇಕ ರಾಜ್ಯ ಸ್ಥಾನ ಬೇಕು ಎಂಬ ಕೂಗು ಇಂದು ನಿನ್ನೆಯದಲ್ಲ. ಇದು ದಶಕಗಳ ಕೂಗು. ದಕ್ಷಣ ಕರ್ನಾಟಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕ ಪ್ರದೇಶ ಅನೇಕ ಮೂಲಸೌಕರ್ಯಗಳಿಂದ ವಂಚಿತವಾದ ಪ್ರದೇಶ. ಬಡತನ, ಅನರಕ್ಷತೆ, ಇನ್ನಿತರ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಅದಲ್ಲದೇ ರಾಜಕೀಯವಾಗಿಯೂ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ನಡುವೆ ಸಚಿವ ಸ್ಥಾನ ಹಂಚಿಕೆಯಲ್ಲಿ ವ್ಯತ್ಯಾಸವಿದೆ. ಇದನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು ಮಾಜಿ ಸಚಿವ ದಿ.ಉಮೇಶ್ ಕತ್ತಿ ಅವರು ಪ್ರತ್ಯೇಕ ರಾಜ್ಯ ಸಮಿತಿಗೆ ಒತ್ತಾಯಿಸಿದ್ದರು. ಲಕ್ಷ್ಮಣ ಸವದಿಯಂಥವರು ವಿಧಾನ ಮಂಡಲದಲ್ಲಿ ಅನೇಕ ಬಾರಿ ಪ್ರಸ್ತಾಪಿಸಿದ್ದರು. ಇದರ ನಡುವೆ ರಾಜು ಕಾಗೆ ಪ್ರತ್ಯೇಕ ರಾಜ್ಯ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ಹೊಸ ಸಂಚಲನ ಮೂಡಿಸಿದೆ
also read :