ರಂಗಭೂಮಿ ಕಲಾವಿದ, ಕಲಿಯುಗದ ಕುಡುಕ ನಾಟಕದ ಖ್ಯಾತಿಯ ರಾಜು ತಾಳಿಕೋಟೆ ವಿಧಿವಶರಾಗಿದ್ದಾರೆ. ಹೃದಯಾಘಾದಿಂದ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಮ್ಮ ಕೊನೆಯುಸಿರೆಳೆದಿದ್ದಾರೆ. ಯೋಗರಾಜ್ ಭಟ್ ಅವರ ಮನಸಾರೆ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಜನಪ್ರಿಯರಾಗಿದ್ದರು. ಬಳಿಕ ಪಂಚರಂಗಿ, ಮತ್ತೊಂದ್ ಮದುವೇನಾ..!, ಮೈನಾ ಸೇರಿದಂತೆ ಹಲವಾರು ಸಿನಿಮಾಗಳ ಮೂಲಕ ಮನೆಮಾತಾಗಿದ್ದರು. ಅಲ್ಲದೇ ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ಬಾಸ್ ಕನ್ನಡ ಸೀಸನ್ ಏಳರ ಸ್ಪರ್ಧಿ ಕೂಡ ಆಗಿದ್ರು. ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ವಿಜಯಪುರ ಜಿಲ್ಲೆಯ ಚಿಕ್ಕ ಸಿಂದಗಿ ಮೂಲದವರಾಗಿದ್ದ ರಾಜು ತಾಳಿಕೋಟಿ ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಸೆಪ್ಟೆಂಬರ್ನಲ್ಲಿ ಖ್ಯಾತ ಹಾಸ್ಯನಟ, ನಾಟಕಕಾರ ಯಶವಂತ ಸರದೇಶಪಾಂಡೆಯವರು ನಿಧನರಾಗಿದ್ದರು. ಇದೀಗ ರಂಗಭೂಮಿಯ ಮತ್ತೊಂಡು ಕೊಂಡಿ ಕಳಚಿದ್ದು, ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
Subscribe to Updates
Get the latest creative news from FooBar about art, design and business.