ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಭಾರತದಲ್ಲಿ ಸಂಭ್ರಮ ಮನೆ ಮಾಡಿದ್ದು, ಅವರನ್ನು ಪ್ರಧಾನಿ ನರೇಂದ್ರ ಮೋದಿ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಈ ಮಧ್ಯೆ ಪ್ರದಾನಿ ನರೇಂದ್ರ ಮೋದಿ ಅವರು ಭಾರತೀಯ ಧರ್ಮ ಗ್ರಂಥ ಭವದ್ಗೀತೆಯನ್ನು ಪುಟಿನ್ ಗೆ ಉಡುಗೊರೆಯಾಗಿ ನೀಡಿದ್ದಾರೆ. ಪುಟಿನ್ ಹಲವು ಒಪ್ಪಂದಗಳಿಗೆ ಸಹಿ ಹಾಕಲು ಹಾಗೂ ಚರ್ಚಿಸುವುದಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಹೈ ಅಲರ್ಟ್ ಇದೆ. ಸಾಕಷ್ಟು ಭ್ರದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ಪುಟಿನ್ ಭಾರತದಲ್ಲಿ ರಾತ್ರಿಯನ್ನು ಕಳೆದಿದ್ದಾರೆ. ಐಷಾರಾಮಿ ಹೋಟೆಲ್ ನಲ್ಲಿ ತಂಗಿದ್ದ ಪುಟಿನ್ ಇರುವ ಸುತ್ತಮುತ್ತ ಭಾರೀ ಭದ್ರತೆ ಕೈಗೊಳ್ಳಲಾಗಿದೆ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ಉಡುಗೊರೆ ನೀಡಿರುವ ವಿಷಯ ತಿಳಿಯುತ್ತಿದ್ದಂತೆ ಇಡೀ ಭಾರತ ಸಂಭ್ರಮಿಸಿದೆ. ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿದಿರುವ ಮೋದಿ ಅವರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇಂದು ಭಾರತ ಹಾಗೂ ರಷ್ಯಾ ಮಧ್ಯೆ ಹಲವು ಪ್ರಮುಖ ಸಭೆಗಳು ನಡೆಯಲಿವೆ. ಹೀಗಾಗಿ ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ಅದರಲ್ಲೂ ನಮ್ಮ ನೆರೆಯ ವೈರಿ ರಾಷ್ಟ್ರಗಳಾಗಿರುವ ಚೀನಾ ಹಾಗೂ ಪಾಕಿಸ್ತಾನ್ ಗಳು ಮಾತ್ರ ಬೆರಗು ಗಣ್ಣಿನಿಂದ ಸೂಕ್ಷ್ಮವಾಗಿ ಗಮನಿಸುತ್ತಿವೆ.

Share.
Leave A Reply