ಬೆಂಗಳೂರು: ಕಳೆದ ಕೆಲವು ದಿನಗಳಿಂದ ಇಂಡಿಗೋ ಸಂಸ್ಥೆಗಳ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುವಂತಾಗಿದೆ. ಇದು ಹಲವು ಕ್ಷೇತ್ರಗಳ ಮೇಲೆಯೂ ಪರಿಣಾಮ ಬೀರುತ್ತಿದೆ.

ತಾಂತ್ರಿಕ ದೋಷ ಹಾಗೂ ಉದ್ಯೋಗಿಗಳ ಕೊರತೆಯಿಂದಾಗಿ ಇಂದು ಕೂಡ 102 ವಿಮಾನಗಳ ಸಂಚಾರ ರದ್ದಾಗಿದೆ ಎಂದು ತಿಳಿದು ಬಂದಿದೆ. ಇಂದು ಒಟ್ಟು 50 ಡಿಪಾರ್ಚರ್ ಹಾಗೂ 52 ಅರೈವಲ್ ವಿಮಾನಗಳು ರದ್ದಾಗಿವೆ. ಅಲ್ಲದೇ, 30ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ.

ಇದರಿಂದಾಗಿ ಪ್ರಯಾಣಿಕರು ಇಂಡಿಗೋ ಸಂಸ್ಥೆಯ ಮೇಲೆ ಹಿಡಿಶಾಪ ಹಾಕುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದಾಗಿ ಟ್ಯಾಕ್ಸಿ ಚಾಲಕರು ಕೂಡ ಪ್ರಯಾಣಿಕರಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ.
ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಗಳ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಎಲ್ಲೆಡೆ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.

Share.
Leave A Reply