ಕಾರವಾರ: ಇಲ್ಲಿನ ಜೈಲಿನಲ್ಲಿ ಇತ್ತೀಚೆಗಷ್ಟೇ ಕೈದಿಗಳು ತಂಬಾಕು ಸೇರಿದಂತೆ ಇತರ ಮಾದಕ ವಸ್ತುಗಳ ಬಳಕೆ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಕ್ಕೆ ಜೈಲರ್ ಸೇರಿದಂತೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಇದರ ಬೆನ್ನಲ್ಲೇ ಈಗ ಮತ್ತೆ ಉದ್ಧಟತನ ಮೆರೆದಿದ್ದಾರೆ. ಇಂದು ಕೂಡ ಕೈದಿಗಳು ದಾಂಧಲೆ ಮಾಡಿದ್ದು, ಹಲವು ವಸ್ತುಗಳನ್ನು ಧ್ವಂಸ ಮಾಡಿದ್ದಾರೆ.

ಮಂಗಳೂರಿನ ಆರು ಆರೋಪಿಗಳು ಜೈಲಿನಲ್ಲಿ ಗಲಾಟೆ ನಡೆಸಿದ್ದಾರೆ. ಅಲ್ಲದೇ, ಟಿವಿ ಸೇರಿದಂತೆ ಹಲವು ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಆರೋಪಿಗಳ ಪುಂಡಾಟದ ಹಿನ್ನೆಲೆಯಲ್ಲಿ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್, ಕೌಶಿಕ ನಿಹಾಲ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಡಕಾಯಿತಿ ಸೇರಿದಂತೆ 12ಕ್ಕೂ ಅಧಿಕ ಪ್ರಕರಣಗಳಲ್ಲಿ ಹೆಚ್ಚು ಪ್ರಕರಣಗಳಲ್ಲಿ ಈ ರೌಡಿಗಳು ಆರೋಪಿಗಳಾಗಿದ್ದಾರೆ.ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರು ಆರೋಪಿಗಳನ್ನು ಕಾರವಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಕಾರವಾರ ಡಿವೈಎಸ್‌ಪಿ ಗಿರೀಶ್ ಜೈಲಿನಲ್ಲಿ ಪರಿಶೀಲನೆ ನಡೆಸಿದ್ದಾರೆ.

Share.
Leave A Reply