ಬೆಂಗಳೂರು, ಫೆ.17: SSLC ಮತ್ತು PUC ವಿದ್ಯಾರ್ಥಿಗಳಿಗಾಗಿ ಮಹತ್ವದ ನ್ಯೂಸ್ ಹೊರಬಿದ್ದಿದೆ. ಇಷ್ಟು ದಿನಗಳ ಕಠಿಣ ಪರಿಶ್ರಮ, ಅಭ್ಯಾಸ ಸಾಬೀತು ಮಾಡುವ ಸಮಯ ಬಂದೇ ಬಿಟ್ಟಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ PUC ಪರೀಕ್ಷೆ ನಡೆಯಲಿದೆ. ಬಳಿಕ ಮಾರ್ಚ್ 18ರಿಂದ ಏಪ್ರಿಲ್ 4ರವರೆಗೆ SSLC ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ದ್ವಿತೀಯ PUC ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ಹಾಗೂ SSLC ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆವರೆಗೆ ನಡೆಯಲಿದೆ. ಈ ಬಾರಿ ದ್ವಿತೀಯ PUC ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು, SSLC ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಲಾಗುತ್ತೆ. ನೀರು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಪರೀಕ್ಷೆಗೆ ಬರುವ ವೇಳೆ ತೊಂದರೆ ಆಗದಂತೆ BMTC ಮತ್ತು KSRTC ಬಸ್‌ಗಳಲ್ಲಿ ಹಾಲ್ ಟಿಕೆಟ್ ತೋರಿಸಿದ್ರೆ ಉಚಿತವಾಗಿ ಪ್ರಯಾಣಿಸಬಹುದು. ಇನ್ನೂ ದ್ವಿತೀಯ PUC ರಿಸಲ್ಟ್‌ಗೆ ಏಪ್ರಿಲ್ 7 ಹಾಗೂ SSLC ರಿಸಲ್ಟ್‌ಗೆ ಏಪ್ರಿಲ್ 24 ಸಂಭಾವ್ಯ ದಿನಾಂಕಗಳನ್ನು ಘೋಷಿಸಲಾಗಿದೆ.
