ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಅಬ್ಬರ (Rain In karwar) ಜೋರಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಗೆ ಗುಡ್ಡ ಕುಸಿದಿದ್ದು, ವಾಹನ ಸವಾರರು ಪರದಾಡ್ತಿದ್ದಾರೆ. ರಸ್ತೆಯಲ್ಲಿ ಗುಡ್ಡ ಕುಸಿದಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ.
ಕಳೆದ ಎರಡು ದಿನದಿಂದ ಸುರಿದ ಅಬ್ಬರದ ಮಳೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಗಿದ್ದು, ಹೆದ್ದಾರಿಯ ಒಂದು ಭಾಗದ ಸಂಚಾರವನ್ನು ಬಂದ್ ಮಾಡಲಾಗಿದೆ. ಕಾರವಾರ ನಗರದ ಟನಲ್ ಭಾಗ, ಬಿಣಗಾದ ಹೆದ್ದಾರಿ ಭಾಗದ ಮೂರು ಕಡೆಗಳಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಗೋವಾ-ಕಾರವಾರ-ಮಂಗಳೂರು ಹೆದ್ದಾರಿ 66 ಒಂದು ಭಾಗದ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಕಾರವಾರದಿಂದ ರಾಷ್ಟ್ರೀಯ ಹೆದ್ದಾರಿಯ 19 ಸ್ಥಳಗಳಲ್ಲಿ ವಾಹನ ನಿಲುಗಡೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಎಚ್ಚರಿಕೆಯಿಂದ ಸಂಚರಿಸಲು ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.
