ಲೀಡ್ಸ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕದಂಚಿನಲ್ಲಿ ಎಡವಿದ್ದ ಕನ್ನಡಿಗ ಕೆಎಲ್ ರಾಹುಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡದ ಇನ್ನಿಂಗ್ಸ್ ನಿಭಾಯಿಸಿದಲ್ಲದೆ, ಲೀಡ್ಸ್‌ನ ಕಠಿಣ ಪಿಚ್‌ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಎಲ್ ರಾಹುಲ್ ಅದ್ಭುತ ಶತಕ ಬಾರಿಸಿದ್ದಾರೆ. ರಾಹುಲ್‌ಗೆ ಸಾಥ್ ನೀಡಿದ ರಿಷಭ್ ಪಂತ್ ಕೂಡ ಅಬ್ಬರದ ಶತಕ ಸಿಡಿಸಿದ್ದಾರೆ.
ಮೊದಲ ಇನ್ನಿಂಗ್ಸ್‌ನಲ್ಲಿ ರಾಹುಲ್ 42 ರನ್‌ಗಳಿಸಿದ್ದರೂ. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಬೌಲರ್‌ಗಳನ್ನ ಬೆಂಡೆತ್ತಿ ಶತಕ ಸಿಡಿಸಿದ್ದಾರೆ. ಇವರಿಗೆ ಸಾಥ್ ನೀಡಿದ ಮೊದಲ ಇನ್ನಿಂಗ್ಸ್‌ನಲ್ಲಿ ಸೆಂಚುರಿ ಸಿಡಿಸಿ ಮಿಂಚಿದ್ದ ಪಂತ್ ಎರಡನೇ ಇನ್ನಿಂಗ್ಸ್ನಲ್ಲೂ ಸ್ಪೋಟಕ ಬ್ಯಾಟಿಂಗ್‌ಗೆ ಮುಂದಾದರು. 202 ಎಸೆತ ಎದುರಿಸಿದ ರಾಹುಲ್ 13 ಫೋರ್ ಸಿಡಿಸಿ ಶತಕ ಸಿಡಿಸಿ ಮಿಂಚಿದ್ದಾರೆ.
ಸಧ್ಯ ಮೂರು ವಿಕೆಟ್ ಕಳೆದುಕೊಂಡು 240 ರನ್‌ಗಳ ಮುನ್ನಡೆ ಸಾಧಿಸಿರುವ ಭಾರತ ಸಧ್ಯ ಇಂಗ್ಲೆಂಡ್ ಮೇಲೆ ಒತ್ತಡ ಏರಿದೆ. ಈ ಇಬ್ಬರು ಆಟಗಾರರು ಔಟಾಗದೆ ಇದೇ ರೀತಿ ಬ್ಯಾಟ್ ಬೀಸಿದರೆ ಮೊದಲ ಟೆಸ್ಟ್ ಗೆಲುವು ಇನ್ನಷ್ಟು ಸುಲಭ ಆಗಬಹುದು.
