ಚಿಕ್ಕಬಳ್ಳಾಪುರದ ಶ್ರೀ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯನ್ನ ಏರ್ಪಡಿಸಲಾಗಿದೆ. ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸಂಪುಟ ಇಂದು ಚಿಕ್ಕಬಳ್ಳಾಪುರ ತಲುಪಿದ್ದಾರೆ. ಸಂಪುಟ ಸಭೆಗೆ ತೆರಳುವ ಮುನ್ನ ಸಂಪುಟ ಸಹದ್ಯೋಗಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ನಂದೀಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾರ್ಥಿಸಿ ಪೂಜೆ ಸಲ್ಲಿಸಿದರು.

ಬಳಿಕ ದೇವಸ್ಥಾನದಲ್ಲಿ ಸ್ವಲ್ಪ ಹೊತ್ತು ಕಾಲ ಕಳೆದು, ಸಂಪುಟದೊಂದಿಗೆ ಸಿಎಂ ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿಕೊಂಡರು. ಈ ಸಂದರ್ಭದಲ್ಲಿ ಸಚಿವರಾದ ಜಮೀರ್‌, ಹೆಚ್‌ ಕೆ ಪಾಟೀಲ್‌, ಪರಮೇಶ್ವರ್‌, ಚೆಲುವನಾರಾಯಣಸ್ವಾಮಿ, ಸತೀಶ್‌ ಜಾರಕಿಹೊಳಿ, ಪ್ರೀಯಾಂಕ್‌ ಖರ್ಗೆ, ಕೃಷ್ಣಭೈರೇಗೌಡ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತಿತರೆ ಶಾಸಕರು ಉಪಸ್ಥಿತರಿದ್ರು.

Share.
Leave A Reply