ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ವಾಹನ ಸಂಚಾರ ಸ್ಥಗಿತವಾಗಿದೆ.

ಭಾರೀ ಭೂಕುಸಿತ ಸಂಭವಿಸಿದ್ದು, ಸ್ಥಳದಲ್ಲಿ ಅಧಿಕಾರಿಗಳು ಮಣ್ಣು ತೆರವು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
ಭೂಕುಸಿತ ಪರಿಣಾಮ ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು ಸಾಗುವ ಲಾರಿ, ಬಸ್, ಟ್ರಕ್‌ಗಳ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಕಾರು, ಬೈಕ್‌ಗಳು ಬದಲಿ ಮಾರ್ಗ ಬಳಸಲು ಎಸ್‌ಪಿ ಡಾ.ಅರುಣ್ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ .75 ರ ಧರ್ಮಸ್ಥಳ ಕ್ರಾಸ್‌ನಿಂದ ಸ್ವಲ್ಪ ಮುಂದೆ ಗುಡ್ಡ ಕುಸಿತ ಉಂಟಾಗಿದ್ದು, ಹೀಗಾಗಿ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ ಹೋಗುವವರು ಬದಲಿ ಮಾರ್ಗ ಬಳಸಬೇಕಾಗಿದೆ.

Share.
Leave A Reply