ಕೊಪ್ಪಳ: ಪೇಪರ್ ಪಾರಿವಾಳ ತೂರಿ ಹಿಡಿಯಲು ಹೋಗಿ ಐದು ವರ್ಷದ ಬಾಲಕ (Child) ಮನೆಯ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು (Fall) ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಆದರೆ, ಘಟನೆಯಲ್ಲಿ ಪವಾಡ ಎಂಬಂತೆ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಾಲಕನನ್ನು ಮಹಮ್ಮದ್ ಹ್ಯಾರಿಸ್ ಎನ್ನಲಾಗಿದೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕ ಚಿಕಿತ್ಸೆ ಪಡೆಯುತ್ತಿದ್ದಾನೆ. ಮಹಮ್ಮದ್ ಹ್ಯಾರಿಸ್ ತಲೆಯಲ್ಲಿ ಬಿರುಕು ಕಂಡು ಬಂದಿರುವುದಾಗಿ ತಿಳಿದು ಬಂದಿದೆ.
ಮಹಮ್ಮದ್ ಹ್ಯಾರಿಸ್ ನಿನ್ನೆ ಮಧ್ಯಾಹ್ನ ಮೊದಲನೇ ಮಹಡಿಯಲ್ಲಿ ಪೇಪರ್ನಿಂದ ಪಾರಿವಾಳ ಮಾಡಿ ಅದನ್ನು ತೂರಿ ಹಿಡಿಯಲು ಹೋಗಿ ಬಿದ್ದಿದ್ದಾನೆ. ಮನೆಯ ಕೆಳಗೆ ಹ್ಯಾರಿಸ್ ಸಹೋದರಿ ಕೂಡ ಆಟವಾಡುತ್ತಿದ್ದು, ಮಹಮ್ಮದ್ ಬಿದ್ದ ತಕ್ಷಣ ಮೇಲೆ ಎತ್ತಿದ್ದಾಳೆ. ಒಳಗಡೆಯಿಂದ ಪೋಷಕರು ಕಿರುಚುತ್ತಾ ಓಡೋಡಿ ಬಂದಿದ್ದಾರೆ. ಕೆಳಗಡೆ ಬಿದ್ದ ಮಗುವನ್ನ ಕೂಡಲೇ ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಕೂಡ 2 ಗಂಟೆ ಒಳಗೆ ಆಪರೇಷನ್ ಮಾಡಿದ್ದಾರೆ. ಪರಿಣಾಮ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಸದ್ಯ ಬಾಲಕನಿಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿದು ಬಂದಿದೆ.
