ಚಿಕ್ಕಬಳ್ಳಾಪುರ: ಟಿಪ್ಪರ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ (Chikkaballpura) ತಾಲೂಕಿನ ಅಜ್ಜವಾರ ಗ್ರಾಮದ ಗೇಟ್ ಹತ್ತಿರ ಈ ಘಟನೆ ನಡೆದಿದೆ. ಒಂದೇ ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ (Siddaramaiah) ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹೊರವಲಯದ ಅಜ್ಜವಾರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ (Tipper Bike Accident) ನಾಲ್ವರು ಯುವಕರು ಸಾವಿಗೀಡಾದ ವಿಚಾರ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಕ್ರಿಸ್ಮಸ್ ಸಂಭ್ರಮದಲ್ಲಿದ್ದ ಕುಟುಂಬಗಳು ಹೀಗೆ ಸೂತಕದ ಮನೆಯಾಗಿ ಬದಲಾದುದ್ದು ದುರದೃಷ್ಟಕರ. ಮನೆಗೆ ಆಧಾರವಾಗಿದ್ದ ಈ ಹುಡುಗರ ನಿಧನದಿಂದ ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ನೆರವಾಗಲು ತಲಾ ರೂ.5 ಲಕ್ಷ ಪರಿಹಾರ ನೀಡುತ್ತಿದ್ದೇವೆ. ತಮ್ಮವರನ್ನ ಕಳೆದುಕೊಂಡು ನೋವಿನಲ್ಲಿರುವ ಜೀವಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆʼ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಅಜ್ಜವಾರ ಗ್ರಾಮಕ್ಕೆ ಸಂಸದ ಡಾ. ಕೆ.ಸುಧಾಕರ್ ಭೇಟಿ ನೀಡಿ ಮೃತ ಯುವಕರ ಅಂತಿಮ ದರ್ಶನ ಪಡೆದಿದ್ದಾರೆ. ಅಲ್ಲದೇ, ಮೃತರ ಕುಟುಂಬಗಳಿಗೆ ತಲಾ 50 ಸಾವಿ ರೂ. ಪರಿಹಾರ ಘೋಷಿಸಿದ್ದಾರೆ.

