Site icon BosstvKannada

ಸಿಎಂ ಕುರ್ಚಿ ಫೈಟ್ ಮಧ್ಯೆ ಅವಘಡ?

ಹುಬ್ಬಳ್ಳಿ: ನಗರದ ಮಂಟೂರು ರಸ್ತೆಯಲ್ಲಿ ಇಂದು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದಲ್ಲಿ ಅವಘಡವೊಂದು ನಡೆದಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದು (Cutout Broken) ಮೂವರು ಗಾಯಗೊಂಡಿದ್ದಾರೆ. ಕಾಂಗ್ರೆಸ್‌ನಿಂದ (Congress) ಕಾರ್ಯಕ್ರಮ ನಡೆಯುವ ಜಾಗದ ಸುತ್ತಮುತ್ತ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ನಾಯಕರ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ ಅವರ ಕಟೌಟ್‌ಗಳು ಮುರಿದು ಬಿದ್ದು ಅದರ ಕೆಳಗಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಖಾಸಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ಮಹಿಳೆ ಕೂಡ ಘಟನೆಯಲ್ಲಿ ಗಾಯಗೊಂಡಿದ್ದು, ಅವರನ್ನು ಶಾರದಾ ಕ್ಯಾರಕಟ್ಟಿ ಎಂದು ಗುರುತಿಸಲಾಗಿದೆ. ಮನೆ ಕೇಳಲೆಂದು ಮಗ ಶಶಿಕಾಂತ ಕ್ಯಾರಕಟ್ಟಿ ಜೊತೆಗೆ ಬಂದಿದ್ದರು. ಮಗನಿಗೆ ಯಾವುದೇ ಗಾಯಗಳಾಗಿಲ್ಲ ಎನ್ನಲಾಗಿದೆ. ಸಿಎಂ ಕುರ್ಚಿ ಫೈಟ್ ಮಧ್ಯೆ ಈ ಘಟನೆ ನಡೆದಿದ್ದು, ಹಲವರು ಹಲವು ರೀತಿ ಮಾತನಾಡಿಕೊಳ್ಳುತ್ತಿದ್ದಾರೆ.

Exit mobile version