Site icon BosstvKannada

ಪತ್ನಿ ವಿಜಯಲಕ್ಷೀ ಜೊತೆ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್‌ ಭೇಟಿ!

ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆ ನಟ ದರ್ಶನ್‌ ಬೆಳ್ಳಂಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ. ಪ್ರತಿ ವರ್ಷವೂ ಆಷಾಢದಲ್ಲಿ ದರ್ಶನ್ ಚಾಮುಂಡಿಯ ಆಶೀರ್ವಾದ ಪಡೆಯುತ್ತಾರೆ. ಕಳೆದ ಬಾರಿ ಜೈಲಿನಲ್ಲಿದ್ದ ಕಾರಣ ದೇವಿಯ ದರ್ಶನ ಮಾಡಿರಲಿಲ್ಲ.

ನಟ ದರ್ಶನ್ ಮಾತ್ರವಲ್ಲ, ನಾಡ ಅದಿದೇವತೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ದೇಗುಲದಲ್ಲಿ ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕೈಂಕಾರ್ಯ ಶುರುವಾಗಿವೆ. ಮುಂಜಾನೆ 3:30ಕ್ಕೆ ವಿವಿಧ ಅಭಿಷೇಕಗಳು ನಡೆದಿವೆ. ಬೆಳಗ್ಗೆ 6ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.

Exit mobile version