ಬೆಂಗಳೂರು: ಕಾಂತಾರ ಚಿತ್ರದ ನಟ ರಿಷಬ್ ಶೆಟ್ಟಿಯನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದ ನಟ ರಣವೀರ್ ಸಿಂಗ್ ಕನ್ನಡಿಗರ ಕ್ಷಮೆ ಕೋರಿದ್ದಾರೆ.

ಈ ವಿವಾದವನ್ನು ನಟ ರಣವೀರ್ ಸಿಂಗ್ ತಮ್ಮ ಸಿನಿಮಾ ಬಿಡುಗಡೆಯಾಗುತ್ತಿರುವ ಸಂದರ್ಭದಲ್ಲಿ ಮಾಡಿಕೊಂಡಿದ್ದು, ವಿಪರ್ಯಾಸ. ತಮ್ಮ ಸಿನಿಮಾ ‘ಧುರಂಧರ್’ (Dhurandhar) ಬಿಡುಗಡೆಯ ಹೊತ್ತಿನಲ್ಲೇ ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ‘ಕಾಂತಾರ’ ಚಿತ್ರ ಹಾಗೂ ರಿಷಬ್ ಶೆಟ್ಟಿ ಅವರನ್ನು ಹೊಗಳಲು ಆರಂಭಿಸಿದ್ದರು.

ಆ ವೇಳೆ ರಣವೀರ್ ಸಿಂಗ್, ‘ದೈವ’ ಎನ್ನುವ ಬದಲು ‘ದೆವ್ವ’ ಎಂದಿದ್ದರು. ಅಲ್ಲದೇ, ರಿಷಬ್ ಅವರು ದೈವವನ್ನು ಅನುಕರಿಸಿದಂತೆ ತಾವೂ ಅನುಕರಣೆ ಮಾಡಲು ಯತ್ನಿಸಿದ್ದಾರೆ. ಇದನ್ನು ಕನ್ನಡಿಗರು ತೀವ್ರವಾಗಿ ಖಂಡಿಸಿದ್ದಾರೆ. ಹೀಗಾಗಿ ನಮ್ಮ ಸಂಸ್ಕೃತಿಗೆ ಅವಮಾನ ಆಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಣವೀರ್ ಸಿಂಗ್ ಬೇಷರತ್ ಕ್ಷಮೆ ಕೇಳಿದ್ದಾರೆ. ಅಲ್ಲದೇ, ಕ್ಷಮೆ ಕೇಳಿರುವ ಪೋಸ್ಟ್ ನ್ನು ಕೂಡ ಹಂಚಿಕೊಂಡಿದ್ದಾರೆ.

ರಿಷಬ್ ಮಾಡಿದ್ದ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ಆ ದೃಶ್ಯವನ್ನು ಮಾಡಲು ಎಷ್ಟು ಶ್ರಮ ಬೇಕು ಎಂಬುವುದು ನನಗೆ ಗೊತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಬಗ್ಗೆ ನನಗೆ ಮೆಚ್ಚುಗೆ ಇದೆ’.‘ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ. ನಾನು ಯಾರದ್ದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

Share.
Leave A Reply