Site icon BosstvKannada

Paru ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಿಧನ!

Paru

ಕನ್ನಡದ Paru ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಅಂತಹ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ ಪರಿಸ್ಥಿತಿ ಕೂಡ ಹದಗೆಟ್ಟಿತ್ತು. ಕಿರುತೆರೆ ತಾರೆಯರು ಹಾಗೂ ಜನರು ಇವರ ಪರಿಸ್ಥಿತಿಯನ್ನು ನೋಡಿ ನೆರವನ್ನು ನೀಡಿದ್ದರು.

ಗುರುತೇ ಸಿಗದಷ್ಟು ಬದಲಾಗಿ ಬೆಡ್ ಮೇಲೆ ಮಲಗಿದ್ದು ನೋಡಿ ಹಲವರಿಗೆ ಶಾಕ್ ಆಗಿತ್ತು.ಈ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ನೆರವನ್ನು ಕೋರಿದ್ದರು. ಆದರೆ ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ.

ಅವರಿಗೆ 47 ವರ್ಷ ವಯಸ್ಸಾಗಿತ್ತು.ಶ್ರೀಧರ್ ಅವರಿಗೆ ಅನಾರೋಗ್ಯ ಉಂಟಾದ ವಿಚಾರದ ಬಗ್ಗೆ ಏಪ್ರಿಲ್​ನಲ್ಲಿ ಸುದ್ದಿ ಬಿತ್ತರ ಆಯಿತು. ವಿಚಿತ್ರ ಸೋಂಕಿನಿಂದ ಅವರು ಈ ರೀತಿ ಆಗಿದ್ದರು. ಗುರುತು ಸಿಗದಷ್ಟು ಬದಲಾಗಿ ಅವರು ಆಸ್ಪತ್ರೆಯ ಬೆಡ್​ ಮೇಲೆ ಮಲಗಿರೋದು ಕಂಡು ಬಂದಿತ್ತು. ಇದನ್ನು ನೋಡಿ ಅಭಿಮಾನಿಗಳಿಗೆ ನಿಜಕ್ಕೂ ಶಾಕ್ ಆಗಿತ್ತು. ಅವರು ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದರು.

Also Read: King ನಡಾಲ್‌ಗೆ ರಾಜ ಗೌರವ.. ಕೊಹ್ಲಿಗೂ ಹೀಗೆ ಇರುತ್ತಾ?

ಇತ್ತೀಚೆಗೆ ಶ್ರೀಧರ್ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಹೀಗಾಗಿ, ಅವರು ಸಹಾಯ ಕೋರಿದ್ದರು. ಅನೇಕರು ಹಣದ ಸಹಾಯ ಕೂಡ ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Exit mobile version