ಐಪಿಎಲ್ 2025 ರಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ 2016 ರ ನಂತರ ಮೊದಲ ಬಾರಿಗೆ ಐಪಿಎಲ್ ಫೈನಲ್‌ಗೆ ಪ್ರವೇಶಿಸಿತು. ಅಂದ್ರೆ 9 ವರ್ಷಗಳ ಬಳಿಕ ಈಗ ಆರ್‌ಸಿಬಿ ಫೈನಲ್ ಪ್ರವೇಶಿಸುವ ಮೂಲಕ ಹಸಿವನ್ನ ನೀಗಿಸಿಕೊಂಡಿದೆ.
ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 14.1 ಓವರ್‌ಗಳಲ್ಲಿ ಕೇವಲ 101 ರನ್‌ಗಳಿಗೆ ಆಲೌಟ್ ಆಯಿತು. ಆರ್‌ಸಿಬಿ ಕೇವಲ 10 ಓವರ್‌ಗಳಲ್ಲಿ ಈ ಗುರಿಯನ್ನು ತಲುಪಿತು. ಫಿಲ್ ಸಾಲ್ಟ್ 27 ಎಸೆತಗಳಲ್ಲಿ ಅಜೇಯ 56 ರನ್ ಗಳಿಸಿದರು. ಜೂನ್ 3 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್‌ನಲ್ಲಿ ಆರ್‌ಸಿಬಿ ಆಡಲಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ಕ್ವಾಲಿಫೈಯರ್-1ನಲ್ಲಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4ನೇ ಬಾರಿ ಫೈನಲ್‌ಗೆ ಲಗ್ಗೆಯಿಟ್ಟಿದೆ. 2009, 2011, 2016ರ ಬಳಿಕ ನಾಲ್ಕನೇ ಬಾರಿ ಐಪಿಎಲ್ ಫೈನಲ್ ತಲುಪಿದ್ದು, ಟ್ರೋಫಿ ಗೆಲ್ಲುವ ನಿರೀಕ್ಷೆ ಮೂಡಿಸಿದೆ.
Also Read: HS Venkateshamurthy: ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ, ಕವಿ, ಸಾಹಿತಿ ಎಚ್.ಎಸ್ ವೆಂಕಟೇಶಮೂರ್ತಿ ನಿಧನ
ಆರ್‌ಸಿಬಿ ಪಂಜಾಬ್ ಕಿಂಗ್ಸ್ ತಂಡವನ್ನು 8 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿ ಫೈನಲ್‌ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಆರ್‌ಸಿಬಿ ಐಪಿಎಲ್ ಫೈನಲ್ ತಲುಪುತ್ತಿರುವುದು ಇದು ನಾಲ್ಕನೇ ಬಾರಿ. ಇದಕ್ಕೂ ಮೊದಲು, 2009, 2011 ಮತ್ತು 2016 ರಲ್ಲಿ ಫೈನಲ್ ತಲುಪಿದ್ದರು. ಆದರೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ 9 ವರ್ಷಗಳ ನಂತರ, ಆರ್‌ಸಿಬಿಗೆ ತನ್ನ ಮೊದಲ ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಸುವರ್ಣಾವಕಾಶ ಸಿಕ್ಕಿದೆ.
