Site icon BosstvKannada

Ahmedabad plane crash : ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆ!

ಗುಜರಾತ್​​ನ ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ (Ahmedabad plane crash) ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್​​ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ.

ಗುರುವಾರ ಮಧ್ಯಾಹ್ನ ಅಹಮದಾಬಾದ್​​ನಿಂದ ಲಂಡನ್​ನ ಗ್ಯಾಟ್ವಿಕ್​​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಾನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿ ಘನಘೋರ ದುರಂತ ಸಂಭವಿಸಿತ್ತು. ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದರು. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸೇರಿದ್ದಾರೆ.

Exit mobile version