ಪ್ರಯಾಣಿಕರ ಭದ್ರತೆಗೆ ಆದ್ಯತೆ ನೀಡುವ ಸಲುವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ(BMRCL)ಆರು ಮೆಟ್ರೋ ನಿಲ್ದಾಣಗಳಲ್ಲಿ ಸುಧಾರಿತ ಸಿಸಿಟಿವಿ ಮತ್ತು AI ತಂತ್ರಜ್ಞಾನವನ್ನು ಅಳವಡಿಸಿದೆ. ಬೈಯಪ್ಪನಹಳ್ಳಿ ಮತ್ತು ಎಂ.ಜಿ. ರೋಡ್ ನಡುವಿನ ಆರು ಮೆಟ್ರೋ ನಿಲ್ದಾಣ(Namma Metro)ಗಳಲ್ಲಿ ಸುಧಾರಿತ ಸಿಸಿಟಿವಿ ಅಳವಡಿಸಲಾಗಿದ್ದು, ಇದು ನಿಲ್ದಾಣದ ಒಳಗಿನ ಭಾಗಗಳ ಜೊತೆಗೆ ಸುತ್ತಲಿನ ಪ್ರದೇಶಗಳನ್ನೂ ಗಮನಿಸುತ್ತೆ.

ಇನ್ನು AI ತಂತ್ರಜ್ಞಾನ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ನೆರವಾಗುತ್ತೆ. ಇದರ ಜೊತೆಗೆ, ಮೆಟ್ರೋ ಸ್ಟೇಷನ್‌ ಮುಂದೆ ಇರುವ ವಾಹನಗಳ ಸಂಖ್ಯಾ ಫಲಕಗಳನ್ನು ಗುರುತಿಸಲು “ಆಟೋಮ್ಯಾಟಿಕ್ ನಂಬ‌ರ್ ಪ್ಲೇಟ್ ರೆಕಗ್ನಿಷನ್” ತಂತ್ರಜ್ಞಾನವನ್ನು ಅಳವಡಿಸಲಾಗಿದೆ.

Also Read: Virat Kohli : ಭಾರತೀಯ ಸೈನ್ಯದ ಪರ ಕೊಹ್ಲಿ ಪೋಸ್ಟ್‌..!

ನಿಲ್ದಾಣದಲ್ಲಿ ಅನುಮಾನಸ್ಪದ ಘಟನೆಗಳು ಕಂಡುಬಂದಲ್ಲಿ ತಕ್ಷಣ ಪತ್ತೆಹಚ್ಚಲು ಇದು ಸಹಕಾರಿಯಾಗಲಿದೆ ಅಂತಾ ಬಿಎಮ್‌ಆರ್‌ಸಿಎಲ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಹೊಸ ಎಐ ಮತ್ತು ANPR ತಂತ್ರಜ್ಞಾನ ನಮಗೆ ನಿಲ್ದಾಣದ ನಿರಂತರ ಕಾರ್ಯ ಚಟುವಟಿಕೆಗಳನ್ನು ಗಮನಿಸಲು ಮತ್ತು ತಕ್ಷಣ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ ಸಾರ್ವಜನಿಕ ಸುರಕ್ಷತೆಗೆ ಬದ್ಧತೆಯನ್ನೂ ತೋರಿಸುತ್ತದೆ ಅಂತಾ ಬಿಎಂಆರ್‌ಸಿಎಲ್​ನ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್ ಹೇಳಿದ್ದಾರೆ.

Share.
Leave A Reply