BosstvKannada

AICC OBC advisory council meeting : ಎಐಸಿಸಿ ಒಬಿಸಿ ಮಂಡಳಿ ಸಭೆಯಲ್ಲಿ ಮಹತ್ವದ ನಿರ್ಣಯ: OBC ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ

AICC OBC ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಇಂದು ಕೂಡ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿ ಮತ್ತು ಹೊಟೇಲ್​ ಶಾಂಗ್ರಿಲಾದಲ್ಲಿ ಎರಡು ದಿನಗಳ ಕಾಲ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಭೆ ನಡೆದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಮೊದಲ ಭಾರಿಗೆ ಸಭೆ ನಡೆಸಲಾಗಿದೆ. ಎರಡು ದಿನಗಳ ಕಾಲ ಚೆರ್ಚೆ ನಡೆಸಲಾಗಿದೆ ಎಂದು ಹೇಳಿದರು.

ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮಂಡಳಿ ಸಭೆಯಲ್ಲಿ (AICC OBC advisory council meeting) ಪ್ರಮುಖವಾಗಿ ಮೂರು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಜಾತಿಗಣತಿ ವಿಚಾರಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಸಲಹಾ ಸಮಿತಿ ಸದಸ್ಯರು ಅಭಿಪ್ರಾಯ ಮಂಡಿಸಿದ್ದಾರೆ. ಎಲ್ಲಾ ಸಮುದಾಯಗಳು ಅಭಿವೃದ್ಧಿಯಾಗಬೇಕು. ಆ ನಿಟ್ಟಿನಲ್ಲಿ ೩ ವಿಚಾರಗಳನ್ನು ಸಭೆಯ ಮುಂದೆ ಮಂಡಿಸಿದ್ದಾರೆ. ಇವರ ಬೆಂಗಳೂರು ಡಿಕ್ಲರೇಷನ್ ೩ ವಿಚಾರಗಳನ್ನು ಸರ್ವಾನುಮತದಿಂದ ನಿರ್ಣಯ ಮಾಡಿದ್ದು, ಎಲ್ಲರ ಬೆಂಬಲವಿದೆ ಎಂದರು.

ಸಭೆಯಲ್ಲಿ ಕೈಗೊಂಡ ಮಹತ್ವದ 3 ನಿರ್ಣಯಗಳು

ಹಿಂದುಳಿದ ವರ್ಗಗದವರ ಅಭಿವೃದ್ಧಿ ನಮ್ಮ ಉದ್ದೇಶವಾಗಿದ್ದು, ಸಾಮಾಜಿಕ ನ್ಯಾಯ ಕೊಡುವುದು ಮುಖ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಾವು ಹೆಜ್ಜೆ ಇಡುತ್ತಿದ್ದೇವೆ. ಸಂವಿಧಾನ ಉದ್ದೇಶದಂತೆ ಸಮಾನತೆಯ ಸಮಾಜ ನಿರ್ಮಾಣ ಮಾಡಬೇಕು. ನ್ಯಾಯ ಯೋಧ ಅಡಿಯಲ್ಲಿ ಕಾಂಗ್ರೆಸ್ ಪಕ್ಷವು ಮುನ್ನಡೆಯುತ್ತಿದೆ. ಶಿಕ್ಷಣ, ಆರ್ಥಿಕ, ಸಾಮಾಜಿಕ ಅಂಶದ ಮೇಲೆ ಜಾತಿಗಣತಿ ನಡೆಯಬೇಕು ಎಂದು ಹೇಳಿದರು.


Exit mobile version