ಪಾಕಿಸ್ತಾನದ ವಿರುದ್ಧ ನಡೆದ ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಲ್ಲಿಯವರೆಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿರಲಿಲ್ಲ. ಆದ್ರೆ ಇಂದು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳ ನಡುವಿನ ನಿಗದಿತ ಮಾತುಕತೆಯ ನಂತರ, ಇಂದು ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi Namo’s speech) ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Namo’s speech: ಇದು ಪ್ರಧಾನಿ ಮೋದಿ ಅವರು ಆಪರೇಷನ್​​ ಸಿಂದೂರ್​​​ ನಂತರ ಮಾಡುತ್ತಿರುವ ಮೊದಲು ಭಾಷಣವಾಗಿದೆ. ಈ ಹಿಂದೆ ಬಿಹಾರದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಪಹಲ್ಗಾಮ್‌ನಲ್ಲಿ ಮೃತಪಟ್ಟವರ ಬಲಿದಾನವನ್ನು ವ್ಯರ್ಥ ಮಾಡಲು ಬಿಡುವುದಿಲ್ಲ. ಉಗ್ರರು ಮತ್ತು ಉಗ್ರರಿಗೆ ನೆರವು ನೀಡುವವರ ಕಲ್ಪನೆ ಮಾಡದ ರೀತಿಯಾಗಿ ನಾವು ತಿರುಗೇಟು ನೀಡುತ್ತೇವೆ ಎಂದು ಗುಡುಗಿದ್ದರು.

Also Read: India Pakistan War : ಕದನ ವಿರಾಮ ಬೇಡವಾಗಿತ್ತು, ವಾರ್ ನಡೆಯಬೇಕಿತ್ತು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

ಇನ್ನು ಪ್ರಧಾನಿ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್ ಅನಿಲ್ ಚೌಹಾಣ್ ಮತ್ತು ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರೊಂದಿಗೆ ಪ್ರಸ್ತುತ ಪರಿಸ್ಥಿತಿಯ ಕುರಿತು ನಿರ್ಣಾಯಕ ಸಭೆ ನಡೆಸಿದ್ದಾರೆ. ಇನ್ನು ಇಂದು ರಾತ್ರಿ 8 ಗಂಟೆಗೆ ಮೋದಿ ಭಾಷಣ ಮಾಡ್ತಿದ್ದು, ಎಲ್ಲರ ಕುತೂಹಲ ಹೆಚ್ಚಾಗಿದೆ.

Share.
Leave A Reply