ಆಪರೇಷನ್ ಸಿಂಧೂರ (operation sindoor)ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರವು ಸರ್ವ ಪಕ್ಷಗಳ ಸಭೆ ನಡೆಸಿದ್ದು, ಈ ಸಭೆಯಲ್ಲಿ ದೇಶದ ಬಹುತೇಕ ರಾಜಕೀಯ ಪಕ್ಷಗಳ ನಾಯಕರು ಭಾಗಹಿಸಿದ್ದಾರೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಭೆಯಲ್ಲಿ ಪಾಲ್ಗೊಂಡು ಆಪರೇಷನ್‌ ಸಿಂಧೂರ ಕುರಿತು ಮಾಹಿತಿ ಪಡೆದಿದ್ದಾರೆ. ಇದರ ನಡುವೆ ಆಪರೇಷನ್‌ ಸಿಂಧೂರ ಇಲ್ಲಿಗೆ ಮುಗಿದಿಲ್ಲ ಎನ್ನುವ ಮೂಲಕ ಕೇಂದ್ರ ಸಚಿವರೊಬ್ಬರು ಪಾಕ್‌ಗೆ ನಡುಕ ಹುಟ್ಟಿಸುವಂತೆ ಮಾಡಿದ್ದಾರೆ.

ಕೇಂದ್ರ ಸರ್ಕಾರ (central government)ದ ಪರವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ವ್ಯವಹಾರಗಳ ಸಚಿವ ಸಚಿವ ಎಸ್ ಜೈಶಂಕರ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಿದ್ದಾರೆ. ಕಾಂಗ್ರೆಸ್‌ನ ಪರವಾಗಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದರೆ, ತೃಣಮೂಲ ಕಾಂಗ್ರೆಸ್‌ನ ಸಂದೀಪ್ ಬಂಡೋಪಾಧ್ಯಾಯ ಮತ್ತು ಡಿಎಂಕೆಯ ಟಿಆರ್ ಬಾಲು ಪಾಲ್ಗೊಂಡಿದ್ದಾರೆ.

ಆಪರೇಷನ್‌ ಸಿಂಧೂರ ಏಪ್ರಿಲ್‌ 22ರಂದು ಕಾಶ್ಮೀರದ ಪೆಹಲ್‌ಗಾಮದಲ್ಲಿ(pahalgam terror attack) ಮೂವರು ಉಗ್ರರು ಭಾರತೀಯ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 26 ಭಾರತೀಯರು ಮೃತಪಟ್ಟಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಬುಧವಾರ ಬೆಳಿಗ್ಗೆ ಆಪರೇಷನ್‌ ಸಿಂಧೂರವನ್ನು ಕೈಗೊಂಡಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಒಂಬತ್ತು ಜಾಗಗಳಲ್ಲಿ ಭಾರತೀಯ ಸೇನೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಒಟ್ಟು 70 ರಿಂದ 100 ಉಗ್ರರು ಹತರಾಗಿದ್ದಾರೆ.

ಈ ಘಟನೆಗಳ ಹಿನ್ನೆಲೆಯಲ್ಲಿ ಭಾರತದಾದ್ಯಂತ ಕನಿಷ್ಠ 21 ವಿಮಾನ ನಿಲ್ದಾಣಗಳನ್ನು ಮೇ10ರ ವರೆಗೆ ಮುಚ್ಚಲಾಗಿದೆ. ಈ ವಿಮಾನ ನಿಲ್ದಾಣಗಳು ಬಹುತೇಕ ಉತ್ತರ ಮತ್ತು ವಾಯುವ್ಯ ರಾಜ್ಯಗಳಲ್ಲಿವೆ. ದೇಶದ ಪ್ರಮುಖ ನಗರಗಳಲ್ಲಿ ಭಾರೀ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಕಾಶ್ಮೀರ, ಪಂಜಾಬ್‌ ಹಾಗೂ ರಾಜಸ್ಥಾನ ಗಡಿಯಲ್ಲಿ ಹೈಅಲರ್ಟ್‌ ಘೋಷಿಸಿದೆ. ರಾಜಸ್ಥಾನದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಪೊಲೀಸ್‌ ಸಿಬ್ಬಂದಿಯ ರಜೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

Also Read: All Party Leaders Meeting Today : ಸರ್ವ ಪಕ್ಷಗಳ ಸಭೆಯಲ್ಲಿ ಕೇಂದ್ರದಿಂದ ಮಹತ್ವದ ನಿರ್ಧಾರ!

ಇದರ ನಡುವೆ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಆಪರೇಷನ್‌ ಸಿಂಧೂರ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್‌ ಸಿಂಧೂರ ಇಲ್ಲಿಗೆ ಮುಗಿದಿಲ್ಲ, ಅಭಿ ಪಿಕ್ಚರ್‌ ಭಾಕೀ ಹೈ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ. ಅಂದ್ರೆ ಉಗ್ರರ ಮೇಲಿನ ಅಟ್ಯಾಕ್‌ ಇಲ್ಲಿಗೆ ಮುಗಿದಿಲ್ಲ ಎನ್ನುವಂತಾಗಿದ್ದು, ಪಾಕ್‌ಗೆ ನಡುಕ ಶುರುವಾಗಿದೆ.

Share.
Leave A Reply