Site icon BosstvKannada

ಪೊಲೀಸರಿಂದ ಕಿರುಕುಳ ಆರೋಪ: ವಿಧಾನಸೌಧದ ಮುಂದೆ ‘ವಿಷ’!


ಬೆಂಗಳೂರು: ವ್ಯಕ್ತಿಯೋರ್ವ ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೊಲೀಸರು ಕಿರುಕುಳ ನೀಡಿದ್ದಾರೆಂದು ಆರೋಪಿಸಿದ್ದಾರೆ.

ಬಾಂಗ್ಲಾ ಅಕ್ರಮ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರು ಕಿರುಕುಳ ನೀಡಿದ್ದಾರೆಂದು ವ್ಯಕ್ತಿ ಆರೋಪಿಸಿದ್ದಾರೆ. ಇಂದು ಬೆಳಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರು ಕಿರುಕುಳ ನೀಡಿದ್ದರು ಎಂದು ಆರೋಪಿಸಿ ಡಾ. ನಾಗೇಂದ್ರಪ್ಪ ಅವರು ವಿಧಾನಸೌಧದ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದು ಬಂದಿದೆ. ಡಾ. ನಾಗೇಂದ್ರಪ್ಪ ಮತ್ತು ಪುನೀತ್ ಕೆರೆಹಳ್ಳಿ ಇಬ್ಬರೂ ನಗರದಲ್ಲಿ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ತೋರಿಸಿದ್ದರು.

ಹೀಗಾಗಿ ದೂರು ನೀಡಿದವರ ವಿರುದ್ಧವೇ ಪ್ರಕರಣ ದಾಖಲಾಗಿತ್ತು. ನಂತರ ಸೂಲದೇವನಹಳ್ಳಿ ಪೊಲೀಸರಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದ ಅವರು ಮನನೊಂದು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Exit mobile version